ETV Bharat / state

ಗೋಕರ್ಣದಲ್ಲಿ ಆತ್ಮಲಿಂಗ ದರ್ಶನ ಪಡೆದು ಪುನೀತರಾದ ಶಿವಭಕ್ತರು - Shiva devotees who have see the Athmalinga

ರಾಜ್ಯದ ದಕ್ಷಿಣಕಾಶಿ ಖ್ಯಾತಿಯ ಗೋಕರ್ಣದಲ್ಲಿ ಶಿವರಾತ್ರಿ ವೈಭವ ಕಳೆಕಟ್ಟಿದ್ದು, ಶಿವನ ಆತ್ಮಲಿಂಗವಿರುವ ಏಕೈಕ ಕ್ಷೇತ್ರವಾಗಿರುವ ಹಿನ್ನೆಲೆ ನಾನಾ ಭಾಗಗಳಿಂದ ಭಕ್ತರು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದರು. ಆದ್ರೆ ಈ ಬಾರಿ ಕೊರೊನಾ ಹಿನ್ನೆಲೆ ಭಕ್ತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದ್ದು, ಜನಜಂಗುಳಿ ಇಲ್ಲದೇ ಶಿವರಾತ್ರಿ ಆಚರಣೆ ನಡೆಯುವಂತಾಯಿತು.

ಗೋಕರ್ಣದಲ್ಲಿ ಆತ್ಮಲಿಂಗ ದರ್ಶನ ಪಡೆದು ಪುನೀತರಾದ ಶಿವಭಕ್ತರು
ಆತ್ಮಲಿಂಗ ದರ್ಶನ ಪಡೆದು ಪುನೀತರಾದ ಶಿವಭಕ್ತರು
author img

By

Published : Mar 11, 2021, 3:07 PM IST

Updated : Mar 11, 2021, 6:03 PM IST

ಕಾರವಾರ: ಮಹಾಶಿವರಾತ್ರಿ ಹಿನ್ನೆಲೆ ಗೋಕರ್ಣದ ಮಹಾಬಲೇಶ್ವರನ ಕ್ಷೇತ್ರಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಹರಿದು ಬಂದಿದ್ದು, ಆತ್ಮಲಿಂಗ ದರ್ಶನ ಪಡೆದು ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದರು.

ಗೋಕರ್ಣದಲ್ಲಿ ಆತ್ಮಲಿಂಗ ದರ್ಶನ ಪಡೆದು ಪುನೀತರಾದ ಶಿವಭಕ್ತರು

ಗೋಕರ್ಣ ಶಿವನ ಆತ್ಮಲಿಂಗವಿರುವ ಏಕೈಕ ಧಾರ್ಮಿಕ ಕ್ಷೇತ್ರವಾಗಿದ್ದು, ಮಹಾಶಿವರಾತ್ರಿಯಂದು ಲಕ್ಷಾಂತರ ಭಕ್ತರು ದೇವರ ದರ್ಶನಕ್ಕೆ ಆಗಮಿಸುತ್ತಾರೆ. ಶಿವರಾತ್ರಿಯಂದು ಮುಂಜಾನೆ 3 ಗಂಟೆಯಿಂದಲೇ ದೇವಸ್ಥಾನದಲ್ಲಿ ಅಷ್ಟೋತ್ತರ ಬಿಲ್ವಾರ್ಚನೆ, ಕುಂಭಾಭಿಷೇಕ, ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳನ್ನು ಕೈಗೊಳ್ಳಲಾಗುತ್ತದೆ. 6 ಗಂಟೆಯ ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿದ್ದು, ಸರತಿ ಸಾಲಿನಲ್ಲಿ ಆಗಮಿಸಿ ಆತ್ಮಲಿಂಗ ಸ್ಪರ್ಶಿಸಿ ಪೂಜೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಆದ್ರೆ ಈ ಬಾರಿ ಕೊರೊನಾ ಹಿನ್ನೆಲೆ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಭಕ್ತರು ಸಹ ಶ್ರದ್ಧಾ, ಭಕ್ತಿಯೊಂದಿಗೆ ಆಗಮಿಸಿ ದೇವರ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.

ಓದಿ:ಗುಮ್ಮಟ ನಗರಿಯಲ್ಲಿ ಮಹಾಶಿವರಾತ್ರಿ ಸಂಭ್ರಮ: ಶಿವನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

ಇನ್ನು ಪ್ರತಿ ವರ್ಷ ಮಹಾಶಿವರಾತ್ರಿ ಸಂದರ್ಭದಲ್ಲಿ ರಾಜ್ಯ, ಹೊರ ರಾಜ್ಯ ಸೇರಿದಂತೆ ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಮಂದಿ ಭಕ್ತರು ಆಗಮಿಸುತ್ತಿದ್ದರು. ಆದರೆ ಈ ಬಾರಿ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ ಮಹಾರಾಷ್ಟ್ರ ಭಾಗದ ಭಕ್ತರ ಸಂಖ್ಯೆ ತೀರಾ ಕಡಿಮೆ ಇತ್ತು. ದೇವರ ದರ್ಶನದ ಬಳಿಕ ಭಕ್ತರು ಸಮುದ್ರ ಸ್ನಾನ ಮಾಡಿ ತೀರದಲ್ಲಿಯೇ ಮರಳಿನ ಶಿವಲಿಂಗವನ್ನು ಮಾಡಿ ಭಜನೆ ಮಾಡುತ್ತಾ ಪೂಜೆ ಸಲ್ಲಿಸಿದರು. ಈ ರೀತಿ ಮಾಡಿದಲ್ಲಿ ಕಷ್ಟಗಳು ದೂರಾಗುತ್ತವೆ ಎನ್ನುವ ನಂಬಿಕೆ ಇದ್ದು, ನೂರಾರು ಭಕ್ತರು ಸಮುದ್ರ ಸ್ನಾನ ಮಾಡಿ ಸಂತೃಪ್ತರಾದರು.

Last Updated : Mar 11, 2021, 6:03 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.