ಶಿರಸಿ: ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿಯ ನಿರ್ಮಾಣ ಹಂತದ ಪಕ್ಕದಲ್ಲಿನ ಕಟ್ಟಡ ಕುಸಿದು ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಇಲಾಖೆಯಿಂದ ಪರಿಹಾರ ನೀಡಲಾಗುವುದು ಎಂದು ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಚಿಕಿತ್ಸಾ ವೆಚ್ಚವನ್ನು ಇಲಾಖೆಯಿಂದಲೇ ಭರಿಸಲಾಗುತ್ತದೆ ಎಂದರು.
ಕಟ್ಟಡದ ಮಾಲೀಕನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.