ಶಿರಸಿ: ರಾಜ್ಯದಲ್ಲಿ ಸಂಭವಿಸಿದ ಭೀಕರ ಪ್ರವಾಹ ಪರಿಹಾರಕ್ಕಿಂತ ಮಹಾರಾಷ್ಟ್ರದಲ್ಲಿ ನಡೆಯುವ ಚುನಾವಣೆ ಪ್ರಚಾರವೇ ಸಿಎಂಗೆ ಬಹಳ ಮುಖ್ಯವಾಗಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಟೀಕಿಸಿದ್ದಾರೆ.
ಶಿರಸಿ ತಹಶೀಲ್ದಾರ ಕಚೇರಿಯಲ್ಲಿ ಸರ್ಕಾರಿ ಅಧಿಕಾರಿಗಳೊಂದಿಗೆ ಅತಿವೃಷ್ಟಿ ಹಾನಿ ಕುರಿತು ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹದಿಂದಾಗಿ ರಾಜ್ಯದಲ್ಲಿ ಸೂತಕದ ಛಾಯೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಯುದ್ಧೋಪಾದಿಯಲ್ಲಿ ಪರಿಹಾರ ಕೆಲಸಗಳನ್ನು ಕೈಗೆತ್ತಿಕೊಳ್ಳಬೇಕು. ಅದನ್ನು ಬಿಟ್ಟು ಮುಖ್ಯಮಂತ್ರಿ ಬಿಎಸ್ವೈ ಚುನಾವಣೆ ಪ್ರಚಾರಕ್ಕೆ ತೆರಳಿರುವುದು ಸರಿಯಲ್ಲ. ಇದನ್ನು ಖಂಡಿಸಿ ರೈತ ನಾಯಕರೊಂದಿಗೆ ಸಭೆ ನಡೆಸಿ ಹೋರಾಟ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದರು.