ಶಿರಸಿ : ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3,50,000 ರೂ. ಹಣವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಬಾಚಣಕಿ ಚೆಕ್ ಪೋಸ್ಟ್ನಲ್ಲಿ ನಡೆದಿದೆ.
ಸಾಗರದ ಮಹ್ಮದ್ ರಿಜ್ವಾನ ಎಂಬಾತ ಮಹಾರಾಷ್ಟ್ರದ ಪುಣೆಯಿಂದ ಮದುವೆಯ ಸಲುವಾಗಿ ಕಾರಿನಲ್ಲಿ ಸಾಗರಕ್ಕೆ ಹೋಗುತ್ತಿರುವಾಗ ಬಾಚಣಕಿ ಚೆಕ್ ಪೋಸ್ಟ್ನಲ್ಲಿ ತಪಾಸಣೆ ವೇಳೆ ಈ ಹಣ ಪತ್ತೆಯಾಗಿದೆ.
ಯಾವುದೇ ದಾಖಲೆ ಇಲ್ಲದ ಕಾರಣ 3,50,000 ಹಣವನ್ನು ಅಧಿಕಾರಿಗಳು ತಹಶೀಲ್ದಾರರಿಗೆ ಒಪ್ಪಿಸಿದ್ದು, ತಹಶೀಲ್ದಾರರು ಹಣವನ್ನು ಜಪ್ತಿ ಮಾಡಿ ಸೂಕ್ತ ದಾಖಲೆಗಳನ್ನು ಹಾಜರುಪಡಿಸುವಂತೆ ಸೂಚಿಸಿದ್ದಾರೆ.