ETV Bharat / state

ಹೆಣ್ಣುಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತೆ: ಸುರಕ್ಷಿತವಾಗಿ ಹೆರಿಗೆ ಮಾಡಿಸಿದ ಭಟ್ಕಳ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ

ವೆಂಕ್ಟಾಪುರದ ಕೊರೊನಾ ಸೋಂಕಿತ ಗರ್ಭಿಣಿಗೆ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ.

Bhatkala
Bhatkala
author img

By

Published : Aug 19, 2020, 3:06 PM IST

ಭಟ್ಕಳ: ಇಲ್ಲಿನ ತಾಲೂಕು ಆಸ್ಪತ್ರೆ ವೈದ್ಯರು ಕೊರೊನಾ ಸೋಂಕಿತ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ.

ವೆಂಕ್ಟಾಪುರದ ಗರ್ಭಿಣಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಶಿರಾಲಿ ಸರ್ಕಾರಿ ಆಸ್ಪತ್ರೆ ವೈದ್ಯರು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ದರು. ಈ ಹಿನ್ನೆಲೆ ಗರ್ಭಿಣಿ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಹೆರಿಗೆ ನೋವು ಆರಂಭವಾಗುತ್ತಿದ್ದಂತೆಯೇ ಡಾ. ಶಮ್ ನೂರ್, ಶುಶ್ರೂಷಕಿಯರಾದ ಸುಮಿತ್ರಾ, ಲವೀನಾ ಹಾಗೂ ಭಾರತಿ ಅವರು ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.

ಇನ್ನು ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ವೈದ್ಯರ ಈ ಕಾರ್ಯಕ್ಕೆ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸವಿತಾ ಕಾಮತ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.