ಕಾರವಾರ: ಶಾಲಾ ಕಟ್ಟಡದ ಕೊಠಡಿಯೊಂದರ ಮೇಲ್ಛಾವಣಿ ಪ್ಲಾಸ್ಟರಿಂಗ್ ಕುಸಿದುಬಿದ್ದ ಪರಿಣಾಮ ಐವರು ವಿದ್ಯಾರ್ಥಿಗಳು ಗಾಯಗೊಂಡರು. ಈ ಘಟನೆ ಅಂಕೋಲಾ ಪಟ್ಟಣದ ನಿರ್ಮಲಾ ಕಾನ್ವೆಂಟ್ ಶಾಲೆಯಲ್ಲಿ ಬುಧವಾರ ನಡೆದಿದೆ.
ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಕುಳಿತ ವೇಳೆ ನಾಲ್ಕನೇ ತರಗತಿ ಮಕ್ಕಳಿದ್ದ ಕೊಠಡಿಯ ಮೇಲ್ಛಾವಣಿ ಪ್ಲಾಸ್ಟರಿಂಗ್ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ತಕ್ಷಣ ಗಾಯಗೊಂಡ ಐವರು ಮಕ್ಕಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ.
ಇದನ್ನೂ ಓದಿ: ನಮ್ಮ ನೀರು ನಾವು ಬಳಸಿಕೊಳ್ಳೋಕೆ ದೊಣ್ಣೆ ನಾಯಕನ ಅಪ್ಪಣೆ ಕೇಳಬೇಕಾ?: ಸಿದ್ದರಾಮಯ್ಯ
ಸುದ್ದಿ ತಿಳಿಯುತ್ತಿದ್ದಂತೆ ಶಾಲೆಗೆ ತೆರಳಿದ ಅಧಿಕಾರಿಗಳು, ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕೂಡ ಆಸ್ಪತ್ರೆಗೆ ತೆರಳಿ ಮಕ್ಕಳ ಆರೋಗ್ಯ ವಿಚಾರಿಸಿದರು. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.