ETV Bharat / state

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ: ನಗರಸಭೆ ಸದಸ್ಯನ ಬಂಧನ

ನಗರಸಭೆ ಸದಸ್ಯ ಯಶವಂತ ಹನುಮಂತಪ್ಪ ಮರಾಠೆ (43) ಎಂಬಾತ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ನಿನ್ನೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

Sexual abuse on miner
Sexual abuse on miner
author img

By

Published : Jun 5, 2020, 10:22 PM IST

ಶಿರಸಿ: ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಹೊತ್ತು ತಲೆಮರೆಸಿಕೊಂಡಿದ್ದ ಶಿರಸಿ ನಗರಸಭೆ ಸದಸ್ಯನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ನಗರಸಭೆ ಸದಸ್ಯ ಯಶವಂತ ಹನುಮಂತಪ್ಪ ಮರಾಠೆ (43) ಬಂಧಿತ ಆರೋಪಿ. ಈತನ ವಿರುದ್ಧ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ನಿನ್ನೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ತನ್ನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿ, ತಾಲೂಕಿನ ಚಿಪಗಿಯ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ. ಆರೋಪಿಗಾಗಿ ತೀವ್ರ ಹುಡುಕಾಟ ನಡೆಸಿದ ಪೊಲೀಸರು, ಇಂದು ಆರೋಪಿಯನ್ನು ಮಾರುತಿ ಆಲ್ಟೋ ವಾಹನ ಸಮೇತ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಸದ್ಯ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಡಿಎಸ್​ಪಿ ಗೋಪಾಲಕೃಷ್ಣ ಟಿ. ನಾಯಕ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಪ್ರದೀಪ್ ಬಿ.ಯು. ನೇತೃತ್ವದಲ್ಲಿ ಗ್ರಾಮೀಣ ಠಾಣೆಯ ಪಿಎಸ್ಐ ನಂಜಾ ನಾಯ್ಕ ಹಾಗೂ ಸಿಬ್ಬಂದಿ ರಮೇಶ್ ಮುಚ್ಚಂಡಿ, ಪ್ರದೀಪ್ ರೇವಣಕರ್, ಸಂಗಪ್ಪ ಹರಿಜನ, ಮಂಜುನಾಥ ಕೆಂಚರೆಡ್ಡಿ, ಗುರುರಾಜ್ ನಾಯಕ ಅವರನ್ನೊಳಗೊಂಡ ಪೊಲೀಸ್ ತಂಡ ಪ್ರಕರಣ ದಾಖಲಾದ 24 ಗಂಟೆಗಳೊಳಗೆ ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.