ಶಿರಸಿ: ರಾಜ್ಯದ ಪ್ರಸಿದ್ಧ ಮಾರಿಕಾಂಬಾ ದೇವಸ್ಥಾನದ ಸಮೀಪದಲ್ಲಿ ವ್ಯಕ್ತಿಯೊಬ್ಬನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ಸೀಲ್ ಡೌನ್ ಮಾಡಿ, ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ.
ಹುಬ್ಬಳ್ಳಿ ಸೇರಿದಂತೆ ವಿವಿಧ ಕಡೆಗಳಲ್ಲಿ ಸಂಚರಿಸುತ್ತಿದ್ದ ಚಾಲಕನಿಗೆ ಭಾನುವಾರ ಸೋಂಕು ದೃಢಪಟ್ಟಿದೆ. ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿಷೇಧಿಸಿ ಅಧ್ಯಕ್ಷ ವೆಂಕಟೇಶ ನಾಯ್ಕ ಆದೇಶ ಹೊರಡಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಶಿರಸಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕೇವಲ ಮೂರು ದಿನಗಳಲ್ಲಿ 13 ಪ್ರಕರಣ ದಾಖಲಾಗಿವೆ.