ETV Bharat / state

ಗೋಕರ್ಣದಲ್ಲಿ ಶಿವರಾತ್ರಿ ಸಂಭ್ರಮ: ಆತ್ಮಲಿಂಗದ ದರ್ಶನ ಪಡೆದ ಭಕ್ತರು - ಪುರಾಣ ಪ್ರಸಿದ್ಧ ಗೋಕರ್ಣದ ಮಹಾಬಲೇಶ್ವರ ದೇವಾಲಯ

ಪುರಾಣ ಪ್ರಸಿದ್ಧ ಗೋಕರ್ಣದ ಮಹಾಬಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದ್ದು, ಭಕ್ತರಿಗೆ ಆತ್ಮಲಿಂಗ ಸ್ಪರ್ಶಕ್ಕೆ ಅವಕಾಶ ಕಲ್ಪಿಸಲಾಗಿದೆ.

ಗೋಕರ್ಣದಲ್ಲಿ ಶಿವರಾತ್ರಿ ಸಂಭ್ರಮ
ಗೋಕರ್ಣದಲ್ಲಿ ಶಿವರಾತ್ರಿ ಸಂಭ್ರಮ
author img

By

Published : Mar 11, 2021, 11:57 AM IST

ಕಾರವಾರ: ಇತಿಹಾಸ ಪ್ರಸಿದ್ಧ ಗೋಕರ್ಣದ ಮಹಾಬಲೇಶ್ವರ ಸನ್ನಿಧಾನದಲ್ಲಿ ಶಿವರಾತ್ರಿ ಸಂಭ್ರಮ ಮನೆ ಮಾಡಿದೆ.

ಗೋಕರ್ಣದಲ್ಲಿ ಶಿವರಾತ್ರಿ ಸಂಭ್ರಮ

ಪುರಾಣ ಪ್ರಸಿದ್ಧ ಗೋಕರ್ಣದ ಮಹಾಬಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದ್ದು, ದೇಶದ ನಾನಾ ಭಾಗಗಳಿಂದ ಆಗಮಿಸಿದ ಭಕ್ತರು ದೇವರ ದರ್ಶನ ಪಡೆದು ಆತ್ಮಲಿಂಗಕ್ಕೆ ಹಾಲು, ಬಿಲ್ವಪತ್ರೆ ಹೂಗಳನ್ನು ಸಮರ್ಪಿಸಿ ಅಭಿಷೇಕ ಮಾಡಿದರು.‌ ಮಾತ್ರವಲ್ಲದೇ, ಭಕ್ತರಿಗೆ ಆತ್ಮಲಿಂಗ ಸ್ಪರ್ಶಕ್ಕೆ ಕೂಡ ಅವಕಾಶ ಕಲ್ಪಿಸಲಾಗಿದೆ.

ಇನ್ನು ಹಿಂದಿನ ವರ್ಷಗಳಲ್ಲಿ ದರ್ಶನಕ್ಕಾಗಿ ಮಧ್ಯ ರಾತ್ರಿಯೇ ಭಕ್ತರು ಬಂದು ಸರದಿ ಸಾಲಿನಲ್ಲಿ ನಿಲ್ಲುತ್ತಿದ್ದರು. ಆದರೆ, ಈ ಬಾರಿ ಭಕ್ತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದ್ದು, ಭಕ್ತರಿಗೆ ಬಹುಬೇಗ ದೇವರ ದರ್ಶನಕ್ಕೆ ಅವಕಾಶ ಲಭಿಸಿದೆ. ಜೊತೆಗೆ ಬಂದಂತಹ ಭಕ್ತರಿಗೆ ವಸ್ತ್ರಸಂಹಿತೆ ಕಡ್ಡಾಯಗೊಳಿಸಿದ್ದು, ದೇವಸ್ಥಾನದ ಆಡಳಿತ ಮಂಡಳಿಯಿಂದ ಸಾಕಷ್ಟು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ಜಿ.ಕೆ. ಹೆಗಡೆ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.