ಶಿರಸಿ : ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆ ಉತ್ತಮ ಸಾಧನೆ ಮಾಡಿದ್ದು, ಇಲ್ಲಿನ ಸಿದ್ದಾಪುರದ ವಿದ್ಯಾರ್ಥಿ ಅನಿರುದ್ಧ ಗುತ್ತಿಕರ 625 ಕ್ಕೆ 624 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ.
ಸಿದ್ದಾಪುರದ ಪ್ರಶಾಂತಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿರುವ ಅನಿರುದ್ಧ, ಸಮಾಜ ವಿಜ್ಞಾನ ವಿಷಯದಲ್ಲಿ 99 ಅಂಕ ಪಡೆದಿದ್ದು, ಉಳಿದ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಗಳಿಸಿದ್ದಾನೆ.
ಸಿದ್ದಾಪುರದ ಎಂ.ಜಿ.ಸಿ. ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಸುಭಾಶ ಗುತ್ತಿಕರ ಹಾಗೂ ಕಾಂಚನಾ ಕಾಮತ್ ದಂಪತಿಗಳ ಪುತ್ರನಾಗಿದ್ದಾನೆ.