ಭಟ್ಕಳ: ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ ಹಲವಾರು ದಿನಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಹೋರಾಟ ಬೆಂಬಲಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಾದ್ಯಂತ ಆರಂಭಿಸಿರುವ ಸಹಿ ಸಂಗ್ರಹ ಅಭಿಯಾನಕ್ಕೆ ಭಟ್ಕಳದ ಸಂತೆ ಮಾರುಕಟ್ಟೆಯಲ್ಲಿ ಉ.ಕ. ಜಿಲ್ಲಾಧ್ಯಕ್ಷ ಡಾ.ನಸೀಮ್ ಖಾನ್ ಚಾಲನೆ ನೀಡಿದರು.
ಬಳಿಕ ಮಾತಾನಾಡಿದ ಅವರು, ದೆಹಲಿಯ ಮೈನಸ್ ಡಿಗ್ರಿ ಚಳಿಯನ್ನು ಲೆಕ್ಕಿಸದೆ ಕಳೆದ ಎರಡು ತಿಂಗಳಿಂದ ರೈತರು ಕೇಂದ್ರದ ಕೃಷಿ ಕಾನೂನು ವಿರೋಧಿಸಿ ನಡೆಸುತ್ತಿರುವ ಹೋರಾಟಕ್ಕೆ ವೆಲ್ಫೇರ್ ಪಾರ್ಟಿ ಸಂಪೂರ್ಣ ಬೆಂಬಲ ನೀಡುತ್ತಿದೆ. ಕೇಂದ್ರ ಸರ್ಕಾರ ಈ ಕರಾಳ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸುತ್ತದೆ ಎಂದರು.
ಕೇಂದ್ರ ಸರ್ಕಾರ ದೇಶದ ರೈತರ ಹಿತ ಕಾಪಾಡುವ ಬದಲು ಅವರನ್ನು ಬೀದಿಗೆ ತಳ್ಳುತ್ತಿದೆ. ರೈತರನ್ನು ಬೆಂಬಲಿಸಿ ಹಾಗೂ ಕೃಷಿ ಕಾನೂನು ವಿರೋಧಿಸಿ ವೆಲ್ಫೇರ್ ಪಾರ್ಟಿ ರಾಜ್ಯಾದ್ಯಂತ ಸಹಿ ಸಂಗ್ರಹ ಅಭಿಯಾನ ನಡೆಸುತ್ತಿದೆ ಎಂದು ತಿಳಿಸಿದರು.