ಶಿರಸಿ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಕಳೆದ ೨೦ ದಿನಗಳಿಂದ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ತಿರಗಾಡುತ್ತಿದ್ದ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಈಗ ರಿಲ್ಯಾಕ್ಸ್ ಮೂಡಿನಲ್ಲಿದ್ದಾರೆ.

ಹೆಬ್ಬಾರ್ ತಮ್ಮ ಮನೆ ಮತ್ತು ಕಾರ್ಯಾಲಯದಲ್ಲಿ ಬೆಳಗ್ಗೆಯಿಂದ ಸಂಜೆ ತನಕ ಬೆಂಬಲಿಗರು, ಕಾರ್ಯಕರ್ತರು ಹಾಗೂ ಆಪ್ತರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಲ್ಲದೇ ಮಕ್ಕಳು ಹಾಗೂ ಮನೆಯವರ ಜೊತೆಯಲ್ಲೂ ಕಾಲ ಕಳೆದಿದ್ದಾರೆ. ಸ್ಥಳೀಯರು ಮತ್ತು ಆಪ್ತರ ಜೊತೆ ಕ್ಷೇತ್ರದ ಸಮಸ್ಯೆಗಳ ಕುರಿತು ಸಾಕಷ್ಟು ಸಮಯದವರೆಗು ಸಮಾಲೋಚನೆ ನಡೆಸಿದ್ದಾರೆಂದು ಅವರ ಆಪ್ತರು ತಿಳಿಸಿದ್ದಾರೆ.