ETV Bharat / state

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಶಿಲಾನ್ಯಾಸ... ಶಿರಸಿಯಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ - ಶಿರಸಿಯಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮದ ಅಂಗವಾಗಿ ಶಿರಸಿ ನಗರ ಸೇರಿದಂತೆ ತಾಲೂಕಿನಾದ್ಯಂತ ದೇವಸ್ಥಾನಗಳಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

Special Pooja
ಶಿರಸಿಯಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ
author img

By

Published : Aug 5, 2020, 3:27 PM IST

ಶಿರಸಿ: ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಶಿಲಾನ್ಯಾಸ ನಡೆದರೆ, ಶಿರಸಿ ತಾಲೂಕಿನ ವಿವಿಧ ರಾಮ ಮಂದಿರಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನಗರದ ನಿತ್ಯಾನಂದ ಮಠಕ್ಕೆ ಭೇಟಿ ಕೊಟ್ಟು, ರಾಮನಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಇದೊಂದು ರಾಷ್ಟ್ರೀಯ ಏಕತಾ ಸಂದರ್ಭ ಎಂದು ಬಣ್ಣಿಸಿದರು.

ಶಿರಸಿಯಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ

ನಗರದ ರಾಘವೇಂದ್ರ ಸರ್ಕಲ್ ಬಳಿ ಬಿಜೆಪಿ ಪ್ರಮುಖರು, ಸಾರ್ವಜನಿಕರು ಸೇರಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜೈ ಶ್ರೀರಾಮ್ ಘೋಷಣೆ ಕೂಗಿದರು. ಎಡೆಬಿಡದೇ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೇ ತಮ್ಮ ಭಕ್ತಿಯನ್ನು ಪ್ರದರ್ಶಿಸಿದರು.

ಶಿರಸಿ ತಾಲೂಕಿನ ಯಡಹಳ್ಳಿ, ನಗರದ ಕಸ್ತೂರಬಾ ನಗರ ಸೇರಿದಂತೆ ವಿವಿಧೆಡೆಯ ದೇವಸ್ಥಾನಗಳಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.