ETV Bharat / state

ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ : ಬೆಳ್ಳಿ, ಕಂಚಿನ ಪದಕ ಗೆದ್ದ ಕಾರವಾರ ಚಿನ್ನದ ಹುಡುಗಿ - Nivedita wins silver and bronze medal in State-level Athletics

ಮಹಿಳೆಯರ ವಿಭಾಗದಲ್ಲಿ 40.08 ಮೀಟರ್ ಹ್ಯಾಮರ್ ಥ್ರೋ ಮಾಡುವ ಮೂಲಕ ಬೆಳ್ಳಿ ಪದಕ ಮತ್ತು 41.90 ಮೀಟರ್ ಡಿಸ್ಕಸ್ ಎಸೆಯುವ ಮೂಲಕ ಕಂಚಿನ ಪದಕ ಪಡೆದಿದ್ದಾರೆ. ನಿವೇದಿತಾ ಕಳೆದ 10 ವರ್ಷಗಳಿಂದ ಕಾರವಾರದ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ತರಬೇತುದಾರ ಪ್ರಕಾಶ ರೇವಣಕರ ಅವರ ಬಳಿ ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್‌ನಲ್ಲಿ ತರಬೇತಿ ಪಡೆಯುತ್ತಿದ್ದಾರೆ..

Nivedita
ರಾಷ್ಟ್ರೀಯ ಕ್ರೀಡಾಪಟು ನಿವೇದಿತಾ
author img

By

Published : May 11, 2022, 1:09 PM IST

ಕಾರವಾರ : ರಾಷ್ಟ್ರೀಯ ಕ್ರೀಡಾಪಟು, ಕಾರವಾರ 'ಚಿನ್ನದ ಹುಡುಗಿ ನಿವೇದಿತಾ' ರಾಜ್ಯ ಮಟ್ಟದ ಹ್ಯಾಮರ್ ಥ್ರೋನಲ್ಲಿ ಬೆಳ್ಳಿ ಮತ್ತು ಡಿಸ್ಕಸ್ ಥ್ರೋನಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಮೇ 8 ಮತ್ತು 9ರಂದು ರಾಜ್ಯ ಅಥ್ಲೆಟಿಕ್ಸ್ ಅಸೋಸಿಯೇಷನ್ ಮತ್ತು ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ 'ಮುಕ್ತ ಪುರುಷರ ಮತ್ತು ಮಹಿಳೆಯರ ಅಥ್ಲೆಟಿಕ್ಸ್' ಕ್ರೀಡಾಕೂಟದಲ್ಲಿ ನಿವೇದಿತಾ ಪ್ರಶಾಂತ ಸಾವಂತ ಭಾಗವಹಿಸಿ ಈ ಸಾಧನೆ ಮಾಡಿದ್ದಾರೆ.

ಬೆಳ್ಳಿ, ಕಂಚಿನ ಪದಕ ಗೆದ್ದ ಕಾರವಾರ ಚಿನ್ನದ ಹುಡುಗಿ

ಮಹಿಳೆಯರ ವಿಭಾಗದಲ್ಲಿ 40.08 ಮೀಟರ್ ಹ್ಯಾಮರ್ ಥ್ರೋ ಮಾಡುವ ಮೂಲಕ ಬೆಳ್ಳಿ ಪದಕ ಮತ್ತು 41.90 ಮೀಟರ್ ಡಿಸ್ಕಸ್ ಎಸೆಯುವ ಮೂಲಕ ಕಂಚಿನ ಪದಕ ಪಡೆದಿದ್ದಾರೆ. ನಿವೇದಿತಾ ಕಳೆದ 10 ವರ್ಷಗಳಿಂದ ಕಾರವಾರದ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ತರಬೇತುದಾರ ಪ್ರಕಾಶ ರೇವಣಕರ ಅವರ ಬಳಿ ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್‌ನಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಇವರು ರಾಷ್ಟ್ರಮಟ್ಟದಲ್ಲಿ ಡಿಸ್ಕಸ್ ಥ್ರೋ ವಿಭಾಗ ಮತ್ತು ಶಾಟ್‌ಫುಟ್ ಥ್ರೋ ವಿಭಾಗದಲ್ಲಿ19 ಪದಕಗಳನ್ನು ಪಡೆದಿದ್ದಾರೆ. ಕ್ರೀಡಾ ಕೋಟಾದ ಅಡಿಯಲ್ಲಿ ತುಮಕೂರಿನ ಸಿದ್ದಗಂಗಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ವಿಭಾಗದಲ್ಲಿ ಪದವಿ ಪಡೆದಿದ್ದಾರೆ.

ಪ್ರಸ್ತುತ ಟಿಸಿಎಸ್​​ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿವೇದಿತಾ ಅವರ ಈ ಸಾಧನೆಗೆ ಉತ್ತರ ಕನ್ನಡ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಸದಾನಂದ ನಾಯ್ಕ, ಕಾರ್ಯದರ್ಶಿ ಕೆ.ಆರ್ ನಾಯಕ ಹಾಗೂ ಜಿಲ್ಲೆಯ ಕ್ರೀಡಾ ಪ್ರೇಮಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.