ಶಿರಸಿ: ಶಾಲಾ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರೊಗ್ರೆಸ್ಸಿವ್ ಪ್ರೌಢಶಾಲೆಯಲ್ಲಿ ನಡೆದಿದೆ. ಸಾಗರ ಮೂಲದ 9 ನೇ ತರಗತಿ ವಿದ್ಯಾರ್ಥಿ ಆಯನ್ ಬಾಬು ಶೇಖ್ ಆತ್ಮಹತ್ಯೆ ಮಾಡಿಕೊಂಡವ.
ಮನೆಯಲ್ಲಿ ಪೋಷಕರು ಬೈಯ್ದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ. ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿಯು ಸ್ಥಳೀಯ ಜನರ ಸಹಾಯದಿಂದ ಬಾವಿಯಿಂದ ಬಾಲಕನ ಶವ ಮೇಲಕ್ಕೆ ಎತ್ತಿದ್ದಾರೆ. ಶಿರಸಿ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
(ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ನೀರಿಲ್ಲದ ಬಾವಿಗೆ ಬಿದ್ದ ಕಾರು: ಮಗು ಸೇರಿ 7 ಜನರ ದುರ್ಮರಣ)