ಕಾರವಾರ: ಚಳಿಗಾಲದ ನಡುವೆಯೂ ಏಕಾಏಕಿ ಸುರಿದ ಮಳೆಯಿಂದಾಗಿ ಯಲ್ಲಾಪುರ ಜನರ ಜೀವನ ಅಸ್ತವ್ಯಸ್ತಗೊಂಡಿದೆ.
ಯಲ್ಲಾಪುರದಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಏಕಾಏಕಿ ಮೋಡ ಕವಿದು ಸುಮಾರು ಒಂದು ಗಂಟೆಗಳ ಕಾಲ ಮಳೆ ಸುರಿಯಿತು. ಹೀಗಾಗಿ ಪಟ್ಟಣದಲ್ಲಿ ಜನಜೀವನ ಅಸ್ತವ್ಯಸ್ತವಾಯ್ತು. ಅನಿರೀಕ್ಷಿತ ಮಳೆಯಿಂದಾಗಿ ಪಟ್ಟಣದಲ್ಲಿ ವ್ಯಾಪಾರಸ್ಥರು ಸಮಸ್ಯೆ ಅನುಭವಿಸುವಂತಾಯಿತು. ಇತ್ತ ಗ್ರಾಮೀಣ ಭಾಗದಲ್ಲಿಯೂ ಜಿಟಿ-ಜಿಟಿ ಮಳೆಯಾಗುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಕಳೆದ ಎರಡು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಘಟ್ಟದ ಮೇಲ್ಭಾಗದ ಶಿರಸಿ, ಸಿದ್ದಾಪುರಗಳಲ್ಲಿ ಎರಡು ದಿನಗಳ ಕಾಲ ಸುರಿದ ಮಳೆಯಿಂದಾಗಿ ಭತ್ತ ಹಾಗೂ ಅಡಿಕೆ ಕೊಯ್ಲಿನಲ್ಲಿ ನಿರತರಾಗಿದ್ದ ರೈತರು ಸಾಕಷ್ಟು ಸಮಸ್ಯೆ ಅನುಭವಿಸುವಂತಾಯಿತು.
ಇದನ್ನೂ ಓದಿ:ನರ್ಮದಾ ನದಿಯಲ್ಲಿ ಮಗುಚಿದ ದೋಣಿ: 7 ಜನರು ಪತ್ತೆ, ಹಲವರು ನಾಪತ್ತೆ