ಕಾರವಾರ: ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಮಾರು 35 ಎಕರೆ ಪ್ರದೇಶದ ಬೆಳೆ ಸುಟ್ಟು ಕರಕಲಾದ ಘಟನೆ ಹಳಿಯಾಳ ತಾಲೂಕಿನ ದೊಡ್ಡಕೊಪ್ಪ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಗುರುನಾಥ ಕಲಕೇರಿ, ಕೃಷ್ಣಾ ಪಾಟೀಲ್ ಹಾಗು ಮಾರುತಿ ಬಾವಕರ್ ಎಂಬ ರೈತರಿಗೆ ಸೇರಿದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿದೆ. ಗಾಳಿಯ ರಭಸಕ್ಕೆ ಒಂದು ಗದ್ದೆಯಿಂದ ಮತ್ತೊಂದು ಗದ್ದೆಗೆ ಹಬ್ಬಿದ ಬೆಂಕಿ ಕೆನ್ನಾಲಿಗೆ ಹಬ್ಬಿದ್ದು ಅಂದಾಜು 70 ಲಕ್ಷ ರೂ. ಮೌಲ್ಯದ ಬೆಳೆ ನಾಶವಾಗಿದೆ.
ಕಬ್ಬಿನ ಗದ್ದೆಯ ಪಕ್ಕದಲ್ಲಿರುವ ವಿದ್ಯುತ್ ಕಂಬಗಳಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಈ ಅನಾಹುತ ನಡೆದಿದೆ ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಬಹುತೇಕ ಭಾಗ ಸುಟ್ಟು ಕರಕಲಾಗಿದೆ. ಹಳಿಯಾಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೊಮ್ಮಾಯಿ ಜೋಳಿಗೆಯಿಂದ ಜನರಿಗೆ ಹೊರೆ ಇಲ್ಲದ, ಪ್ರಿಯವೆನಿಸುವ ಹೊಸ ಘೋಷಣೆ ಖಚಿತ!