ಭಟ್ಕಳ: ನಿನ್ನೆ ತಡ ರಾತ್ರಿ ಸುರಿದ ಗಾಳಿ ಮಳೆಗೆ ಮುಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡಭಟ್ಕಳದಲ್ಲಿ ಮನೆಯೊಂದು ಸಂಪೂರ್ಣ ಕುಸಿದು ಬಿದ್ದಿದೆ. ಸ್ಥಳಕ್ಕೆ ಶಾಸಕ ಸುನೀಲ ನಾಯ್ಕ ಭೇಟಿ ನೀಡಿ ತುರ್ತು ನಿರ್ವಹಣೆಗೆ ಕೈಲಾದ ಸಹಾಯ ನೀಡಿದ್ದಾರೆ.
ನಾಗಮ್ಮ ಮಾಸ್ತಪ್ಪ ನಾಯ್ಕ (70) ಇವರ ವಾಸ್ತವ್ಯದ ಮನೆ ಸಂಪೂರ್ಣ ಕುಸಿದು ಬಿದ್ದಿದೆ. ಈ ಮಾಹಿತಿ ತಿಳಿದ ಶಾಸಕ ಸುನೀಲ ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಸರ್ಕಾರದಿಂದ ಹೊಸ ಮನೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಅಭಯ ನೀಡಿದ್ದಾರೆ.
ಈ ಸಂದರ್ಭದಲ್ಲಿ ಬಿ.ಜೆ.ಪಿ. ಹಿರಿಯ ಮುಖಂಡ ಕೃಷ್ಣ ನಾಯ್ಕ, ಪಂಚಾಯಿತಿ ಮಾಜಿ ಸದಸ್ಯ ಚಂದ್ರಹಾಸ ನಾಯ್ಕ, ಮುಟ್ಟಳ್ಳಿ ಗ್ರಾಮ ಲೆಕ್ಕಿಗ ಸಲ್ಮಾನ್ ಖಾನ್, ಪಂಚಾಯಿತಿ ಪಿ.ಡಿ.ಓ.ರಾಜೇಶ್ವರಿ ಚಂದಾವರ, ಪಂಚಾಯಿತಿ ಕಾರ್ಯದರ್ಶಿ ಮಂಜುನಾಥ, ಸ್ಥಳೀಯ ಮುಖಂಡರಾದ ವೆಂಕಟೇಶ್ ಟಿ.ನಾಯ್ಕ ಮುಂತಾದವರು ಉಪಸ್ಥಿತರಿದ್ದರು.