ETV Bharat / state

'ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ನೇತೃತ್ವದಲ್ಲಿ ಹೆಲಿಕಾಪ್ಟರ್‌ ಪತನದ ತನಿಖೆ ನಡೆಯಲಿ' - ಸೇನಾ ಹೆಲಿಕಾಪ್ಟರ್ ದುರಂತ

ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಸುಪ್ರೀಂಕೋರ್ಟ್‌ ಹಿರಿಯ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಬೇಕು ಎಂದು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒತ್ತಾಯಿಸಿದರು.

Subramanian Swamy
ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ
author img

By

Published : Dec 9, 2021, 2:09 PM IST

ಉಡುಪಿ: ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಂಭೀರ ತನಿಖೆಯಾಗಬೇಕು ಎಂದು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.

ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ದೇಶದ ಸುರಕ್ಷತೆಯ ದೃಷ್ಟಿಯಿಂದ ಸೇನಾ ಹೆಲಿಕಾಪ್ಟರ್ ಪತನವಾಗಿರುವುದು ಗಂಭೀರವಾದ ವಿಷಯವಾಗಿದೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ರೀತಿಯ ತನಿಖೆಯಾಗಬೇಕು.

ಕೇವಲ ಸಾಮಾನ್ಯ ತನಿಖೆ ನಡೆಸಿದರೆ ಪ್ರಯೋಜನವಿಲ್ಲ. ಸುಪ್ರೀಂಕೋರ್ಟ್ ಹಿರಿಯ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಬೇಕು. ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜನರಿಗೆ ಸೂಕ್ತ ಮಾಹಿತಿ ನೀಡಬೇಕು. ಘಟನೆಯಿಂದ ಆಘಾತವಾಗಿದೆ ಎಂದು ಸ್ವಾಮಿ ಹೇಳಿದರು.

ಇದನ್ನೂ ಓದಿ: ಜನರಲ್‌ ಬಿಪಿನ್‌ ರಾವತ್‌ ಅವರಿದ್ದ ಹೆಲಿಕಾಪ್ಟರ್‌ ಎಷ್ಟು ಸುರಕ್ಷಿತ? ವಿಶೇಷತೆಗಳೇನು? ಸಂಪೂರ್ಣ ವಿವರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.