ETV Bharat / state

ಕಾರವಾರದಲ್ಲಿ ವಾಣಿಜ್ಯ ಬಂದರು ವಿಸ್ತರಣೆಗೆ ಬ್ರೇಕ್... ಹೈಕೋರ್ಟ್ ಮಧ್ಯಂತರ ತಡೆ

ಕಾರವಾರದಲ್ಲಿ ಮೀನುಗಾರರು ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ನಡೆಸುತ್ತಿದ್ದ ಹೋರಾಟಕ್ಕೆ ಮೊದಲ ಗೆಲುವು ಸಿಕ್ಕಿದೆ. ಸಾಗರಮಾಲಾ ಯೋಜನೆಯಡಿ ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಮೀನುಗಾರರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಹೈಕೋರ್ಟ್ ಮಧ್ಯಂತರ ತಡೆ
ಹೈಕೋರ್ಟ್ ಮಧ್ಯಂತರ ತಡೆ
author img

By

Published : Jan 24, 2020, 10:03 PM IST

ಕಾರವಾರ: ಕಡಲನಗರಿ ಕಾರವಾರದಲ್ಲಿ ವಾಣಿಜ್ಯ ಬಂದರು ವಿಸ್ತರಣೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಕಾಮಗಾರಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡಿದೆ.

ಕಳೆದ 12 ದಿನಗಳಿಂದ ಕೆಲಸ ಬಿಟ್ಟು ಪ್ರತಿಭಟನೆ ನಡೆಸುತ್ತಿರುವ ಮೀನುಗಾರರು ಕಡಲತೀರದ ಯಥಾಸ್ಥಿತಿಗೆ ಆಗ್ರಹಿಸಿದ್ದು, ನಾಳೆ ಬೃಹತ್ ಮೆರವಣಿಗೆ ಮೂಲಕ ಯೋಜನೆ ವಿರೋಧ ವ್ಯಕ್ತಪಡಿಸಿ ಬಳಿಕ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಕೈಬಿಡಲು ಮುಂದಾಗಿದ್ದಾರೆ.

ಹೈಕೋರ್ಟ್ ಮಧ್ಯಂತರ ತಡೆ ಕುರಿತು ಮಾಜಿ ಶಾಸಕರ ಸುದ್ದಿಗೋಷ್ಠಿ

ವಾಣಿಜ್ಯ ಬಂದರು ವಿಸ್ತರಣೆಯಿಂದಾಗಿ ಮೀನುಗಾರಿಕೆಗೆ ತೊಂದರೆಯಾಗುವ ಜೊತೆಗೆ ಟ್ಯಾಗೋರ ಕಡಲತೀರಕ್ಕೆ ಹಾನಿಯಾಗುವ ಆತಂಕ ಎದುರಾಗಿತ್ತು. ಇದರಿಂದ ಮೀನುಗಾರರು ಕಳೆದ 12 ದಿನಗಳಿಂದ ಮೀನುಗಾರಿಕೆ ಹಾಗೂ ಮೀನುಮಾರಾಟ ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹೊರಾತ್ರಿ ಪ್ರತಿಭಟನೆಗೆ ಇಳಿದಿದ್ದರು. ಅಲ್ಲದೆ ಈ ಸಂಬಂಧ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಹೋರಾಟ ನಡೆಸಿದ ಪರಿಣಾಮ ಗುರುವಾರ ವಿಚಾರಣೆ ನಡೆಸಿದ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದ್ದು, ಮೀನುಗಾರರಿಗೆ ಮೊದಲ ಜಯ ಲಭಿಸಿದೆ.

ಇನ್ನು ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಬೃಹತ್ ಪ್ರತಿಭಟನೆಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಮೀನುಗಾರಿಕಾ ಸಚಿವರ ಸಮ್ಮುಖದಲ್ಲಿ ಚರ್ಚಿಸಲು ಜನವರಿ 31ರಂದು ಬೆಂಗಳೂರಿನಲ್ಲಿ ಸಭೆ ಕರೆದಿದೆ. ಆದರೆ ಇದೀಗ ಕಾಮಗಾರಿಗೆ ಹೈಕೋರ್ಟ್ ತಡೆ ನೀಡಿದ್ದು ಸಭೆ ನಡೆಯುತ್ತದೆಯೋ ಇಲ್ಲವೋ ಎಂಬುದು ಇನ್ನು ಸ್ಪಷ್ಟಗೊಂಡಿಲ್ಲ.

Intro:

Body:ಕಾರವಾರ: ಕಡಲನಗರಿ ಕಾರವಾರದಲ್ಲಿ ವಾಣಿಜ್ಯ ಬಂದರು ವಿಸ್ತರಣೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಕಾಮಗಾರಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡಿದೆ. ಆದರೆ ಕಳೆದ ೧೨ ದಿನಗಳಿಂದ ಕೆಲಸ ಬಿಟ್ಟು ಪ್ರತಿಭಟನೆ ನಡೆಸುತ್ತಿರುವ ಮೀನುಗಾರರು ಕಡಲತೀರದ ಯಥಾಸ್ಥಿತಿಗೆ ಆಗ್ರಹಿಸಿದ್ದು, ನಾಳೆ ಬೃಹತ್ ಮೆರವಣಿಗೆ ಮೂಲಕ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಬಳಿಕ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಕೈಬಿಡಲು ಮುಂದಾಗಿದ್ದಾರೆ.
ವೈಸ್ ೧
ಕಾರವಾರದಲ್ಲಿ ಮೀನುಗಾರರು ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ನಡೆಸುತ್ತಿದ್ದ ಹೋರಾಟಕ್ಕೆ ಮೊದಲ ಗೆಲುವು ಸಿಕ್ಕಿದೆ. ಸಾಗರಮಾಲಾ ಯೋಜನೆಯಡಿ ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಮೀನುಗಾರರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಹೌದು, ವಾಣಿಜ್ಯ ಬಂದರು ವಿಸ್ತರಣೆಯಿಂದಾಗಿ ಮೀನುಗಾರಿಕೆಗೆ ತೊಂದರೆಯಾಗುವ ಜತೆಗೆ ಟ್ಯಾಗೋರ ಕಡಲತೀರಕ್ಕೆ ಹಾನಿಯಾಗುವ ಆತಂಕ ಎದುರಾಗಿತ್ತು. ಇದರಿಂದ ಮೀನುಗಾರರು ಕಳೆದ ೧೨ ದಿನಗಳಿಂದ ಮೀನುಗಾರಿಕೆ ಹಾಗೂ ಮೀನುಮಾರಾಟ ಸ್ಥಗೀತಗೊಳಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹೊರಾತ್ರಿ ಪ್ರತಿಭಟನೆಗೆ ಇಳಿದಿದ್ದರು. ಅಲ್ಲದೆ ಈ ಸಂಬಂಧ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಹೋರಾಟ ನಡೆಸಿದ ಪರಿಣಾಮ ಗುರುವಾರ ವಿಚಾರಣೆ ನಡೆಸಿದ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದ್ದು, ಮೀನುಗಾರರಿಗೆ ಮೊದಲ ಜಯ ಲಭಿಸಿದೆ.

ಬೈಟ್ ೧
ಸತೀಶ್ ಸೈಲ್, ಮಾಜಿ ಶಾಸಕ ಹಾಗೂ ನ್ಯಾಯಾಲಯದಲ್ಲಿ ಹೋರಾಟ ನಡೆಸಿದವರು (ಹಸಿರು ಅಂಗಿ ಧರಿಸಿದವರು)

ವೈಸ್ ೨
ಇನ್ನು ಬಂದರು ವಿಸ್ತರಣೆ ಕಾಮಗಾರಿಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದ ಹಿನ್ನೆಲೆಯಲ್ಲಿ ಮೀನುಗಾರರು ಸಂತಸ ವ್ಯಕ್ತಪಡಿಸಿದ್ದಾರೆ. ಯೋಜನೆ ವಿರೋಧಿಸಿ ಮೀನುಗಾರರು ಸಾಕಷ್ಟು ಹೋರಾಟ ನಡೆಸಿದ್ದು ಯೋಜನೆ ಕೈ ಬಿಡುವರೆಗೂ ಮುಂದುವರಿಸಲಿದ್ದೇವೆ. ಆದರೆ ನ್ಯಾಯಾಲಯದಿಂದ ತಾತ್ಕಾಲಿಕ ತಡೆ ಇರುವ ಕಾರಣ ನಾಳೆ ಬೃಹತ್ ಮೆರವಣಿಗೆ ಮೂಲಕ ಯೋಜನೆ ವಿರೋಧದ ಬಗ್ಗೆ ಸರ್ಕಾರದ ಗಮನ ಸೆಳೆಯಲಿದ್ದು ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಕೈ ಬಿಡಲು ಮುಂದಾಗಿದ್ದಾರೆ.
ಬೈಟ್ ೨ ರಾಜು ತಾಂಡೇಲ, ಮೀನುಗಾರ ಮುಖಂಡ(ಬಿಳಿ ಅಂಗಿ ಧರಿಸಿದವರು

ವೈಸ್ ೩
ಇನ್ನು ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಬೃಹತ್ ಪ್ರತಿಭಟನೆಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಮೀನುಗಾರಿಕಾ ಸಚಿವರ ಸಮ್ಮುಖದಲ್ಲಿ ಚರ್ಚಿಸಲು ಜನವರಿ ೩೧ ರಂದು ಬೆಂಗಳೂರಿನಲ್ಲಿ ಸಭೆ ಕರೆದಿದೆ. ಆದರೆ ಇದೀಗ ಕಾಮಗಾರಿಗೆ ಹೈಕೋರ್ಟ್ ತಡೆ ನೀಡಿದ್ದು ಸಭೆ ನಡೆಯುತ್ತದೆಯೋ ಇಲ್ಲವೋ ಎಂಬುದು ಇನ್ನು ಸ್ಪಷ್ಟಗೊಂಡಿಲ್ಲ.

ಒಟ್ಟಿನಲ್ಲಿ ಮೀನುಗಾರರು ಕಳೆದ ೧೨ ದಿನಗಳಿಂದ ಕೆಲಸ ಬಿಟ್ಟು ನಡೆಸುತ್ತಿದ್ದ ಹೋರಾಟಕ್ಕೆ ಹೈಕೋರ್ಟ್ ನೀಡಿದ ತಡೆಯಾಜ್ಞೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಆದರೆ ಸರ್ಕಾರ ಯೋಜನೆ ಜಾರಿಗೆ ಮುಂದಾಗಿದ್ದು, ಮುಂದಿನ ದಿನಗಳಲ್ಲಿ ಏನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.