ಶಿರಸಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಮನೆಯ ಮುಂಭಾಗವಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಉತ್ತರ ಕನ್ನಡದ ಸಿದ್ಧಾಪುರ ತಾಲೂಕಿನ ಮತ್ತೀಹಳ್ಳಿಯಲ್ಲಿ ನಡೆದಿದೆ.
ಮೇಘಾ ತಿರುಮಲೇಶ್ವರಭಟ್ಟ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕ್ಷುಲ್ಲಕ ವಿಷಯಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ನಾಣಿಕಟ್ಟ ಪ್ರೌಢಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.