ETV Bharat / state

ಉತ್ತರ ಕನ್ನಡದಲ್ಲಿ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್​​: ಸ್ಥಳ ಪರಿಶೀಲನೆ ನಡೆಸಿದ ಸಚಿವರು - ಈಟಿವಿ ಭಾರತ ಕನ್ನಡ ನ್ಯೂಸ್​

ಉತ್ತರಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್​ ನಿರ್ಮಾಣ ಆಗಬೇಕೆಂದು ಜಿಲ್ಲೆಯ ಜನರು ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದು, ಈ ಸಂಬಂಧ ಇಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್​ ಕುಮಟಾಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

the-minister-inspected-site-for-hospital-in-kumta
ರಕನ್ನಡದಲ್ಲಿ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್​​ : ಸ್ಥಳ ಪರಿಶೀಲನೆ ನಡೆಸಿದ ಸಚಿವರು
author img

By

Published : Oct 12, 2022, 5:42 PM IST

ಕಾರವಾರ (ಉತ್ತರಕನ್ನಡ) : ಜಿಲ್ಲೆಗೊಂದು ಸುಸಜ್ಜಿತ ಆಸ್ಪತ್ರೆ ಬೇಕು ಎಂದು ಉತ್ತರಕನ್ನಡ ಜಿಲ್ಲೆಯ ಜನರು ವಿವಿಧ ರೀತಿಯಲ್ಲಿ ಅಭಿಯಾನ ಮಾಡಿದ್ದರು. ಈ ಕುರಿತು ಜನಪ್ರತಿನಿಧಿಗಳೂ ಸದನದಲ್ಲಿ ಚರ್ಚೆ ನಡೆಸಿದ್ದು, ಇದು ರಾಜ್ಯಮಟ್ಟದಲ್ಲಿ ಸುದ್ದಿಯಾಗಿತ್ತು. ಈ ವೇಳೆ, ಜಿಲ್ಲೆಗೆ ಖುದ್ದು ಭೇಟಿ ನೀಡಿ ಆಸ್ಪತ್ರೆ ನಿರ್ಮಾಣದ ಕುರಿತು ಪರಿಶೀಲಿಸುವುದಾಗಿ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಭರವಸೆ ನೀಡಿದ್ದರು. ಅಂತೆಯೇ ಇಂದು ಜಿಲ್ಲೆಗೆ ಆಗಮಿಸಿದ ಸಚಿವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸ್ಥಳ ಪರಿಶೀಲನೆ‌ ನಡೆಸಿದ್ದಾರೆ.

ರಕನ್ನಡದಲ್ಲಿ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್​​ : ಸ್ಥಳ ಪರಿಶೀಲನೆ ನಡೆಸಿದ ಸಚಿವರು

ಭೌಗೋಳಿಕವಾಗಿ ವಿಶೇಷತೆಯನ್ನು ಹೊಂದಿರುವ, ಪ್ರವಾಸೋದ್ಯಮದಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಜಿಲ್ಲೆ ಉತ್ತರಕನ್ನಡ. ಇಷ್ಟೆಲ್ಲ ಇದ್ದರೂ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ಇಲ್ಲ ಎನ್ನುವ ಕೂರಗು ಇಲ್ಲಿನ ಜನರಿಗಿತ್ತು. ಜಿಲ್ಲೆಗೆ ಒಂದಾದರೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಿ ಕೊಡಿ ಎಂದು ಜನರು ವಿವಿಧ ರೀತಿಯಲ್ಲಿ ಹೋರಾಟ, ಪ್ರತಿಭಟನೆಗಳನ್ನು ಮಾಡಿದ್ದರು. ಕೊನೆಗೂ ಜನರ ಹೋರಾಟದ ಫಲವಾಗಿ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆದಿದೆ.

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸಚಿವರಿಂದ ಸ್ಥಳ ಪರಿಶೀಲನೆ : ಮೊದಲು ಕಾರವಾರದ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿದ ಸಚಿವ ಸುಧಾಕರ್ 150 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 450 ಬೆಡ್‌ಗಳ ಮೆಡಿಕಲ್ ಕಾಲೇಜು ಆಸ್ಪತ್ರೆಯ ನೂತನ ಕಟ್ಟಡವನ್ನು ವೀಕ್ಷಣೆ ಮಾಡಿದರು. ಇದೇ ವೇಳೆ ಆಸ್ಪತ್ರೆಯಲ್ಲಿ ಟ್ರಾಮಾ ಕೇರ್ ಸೆಂಟರ್, ಕ್ಯಾನ್ಸರ್ ಚಿಕಿತ್ಸೆ ಸೇರಿದಂತೆ ಉನ್ನತ ಸೌಲಭ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಈ ಸಂಬಂಧ ಮೆಡಿಕಲ್ ಕಾಲೇಜಿನ‌ ಅಧಿಕಾರಿಗಳು ಹಾಗೂ ವೈದ್ಯರೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆಗಳನ್ನು ನೀಡಿದರು. ಇದೇ ವೇಳೆ, ಕಾರವಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಚಿವರು ಇಲ್ಲಿನ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಇನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಸುಧಾಕರ್, ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಕುರಿತು ಮಾಹಿತಿ ಪಡೆದರು. ಜಿಲ್ಲಾಡಳಿತದಿಂದ ಕುಮಟಾ, ಮಿರ್ಜಾನ್ ರೈಲು ನಿಲ್ದಾಣ ಸಮೀಪದ ಪ್ರದೇಶ, ಎತ್ತಿನಬೈಲ್, ಕೊಂಕಣ ಎಜ್ಯುಕೇಷನ್ ಬಳಿ ಆಸ್ಪತ್ರೆಗಾಗಿ ಸ್ಥಳಗಳನ್ನು ಗುರುತಿಸಿದ್ದು, ಮಿರ್ಜಾನ್‌ಗೆ ಭೇಟಿ ನೀಡಿದ ಸಚಿವರು ಸ್ಥಳ ಪರಿಶೀಲನೆ‌ ನಡೆಸಿದರು.

ಇನ್ನು ಜಿಲ್ಲೆಯ ಜನರ ಬೇಡಿಕೆಯಂತೆ ಸಚಿವ ಸುಧಾಕರ್ ಆಗಮಿಸಿದ್ದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಸಂತಸ ವ್ಯಕ್ತಪಡಿಸಿದರು. ಜಿಲ್ಲೆಯ ಆರೋಗ್ಯ ಸೇವೆ ಅಭಿವೃದ್ಧಿ ನಿಟ್ಟಿನಲ್ಲಿ ಸಚಿವರ ಭೇಟಿಯಿಂದ ನಿರೀಕ್ಷೆ ಹೆಚ್ಚಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ : ಹೊಸಪೇಟೆಯಲ್ಲಿ ಜನಸಂಕಲ್ಪ ಯಾತ್ರೆ.. ರಾಜಾಹುಲಿ ಬಿಎಸ್​ವೈ ಗರ್ಜನೆಗೆ ಕಾಂಗ್ರೆಸ್​​ ತತ್ತರ ಎಂದ ಸಿಎಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.