ETV Bharat / state

ರೈತರ ಸಮಸ್ಯೆಗಳನ್ನು‌ ಬಗೆಹರಿಸಲು ಕೆಲಸ ಮಾಡಬೇಕು: ಮಾಜಿ ಸಚಿವ ದೇಶಪಾಂಡೆ

ರಾಜ್ಯ ಸರ್ಕಾರ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲಿ ರೈತರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ದೇಶಪಾಂಡೆ ಒತ್ತಾಯಿಸಿದರು.

author img

By

Published : Apr 6, 2020, 3:35 PM IST

rv deshpande
ಮಾಜಿ ಸಚಿವ ಆರ್.ವಿ.ದೇಶಪಾಂಡೆ

ಶಿರಸಿ: ರಾಜ್ಯ ಸರ್ಕಾರದ ರೈತರ ವಿವಿಧ ಸಮಸ್ಯೆಗಳನ್ನು‌ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಒತ್ತಾಯಿಸಿದ್ದಾರೆ.‌

rv deshpande
ಮಾಜಿ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಸಿಗೆ ಬಂದಿದ್ದು ಕುಡಿಯುವ ನೀರಿನ ಅಭಾವ ಎದುರಾಗಲಿದೆ. ಅಲ್ಲದೇ ರೈತರಿಗೆ ಕೃಷಿ ಉಪಕರಣಗಳ ಸಮಸ್ಯೆ ಉಂಟಾಗಿದೆ. ಇದನ್ನು ರಾಜ್ಯ ಸರ್ಕಾರ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಮಾಜಿ ಸಚಿವ ಆರ್.ವಿ.ದೇಶಪಾಂಡೆ

ರಾಜ್ಯದ 52 ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲಾಗಿದೆ. ಆದರೆ ಬರ ನೀಗಿಸುವ ದೃಷ್ಟಿಯಲ್ಲಿ ಕೆಲಸ ಆಗುತ್ತಿಲ್ಲ. ಕಿಸಾನ್ ಸಮ್ಮಾನ್ ಯೋಜನೆಯ ಮೊತ್ತವೂ ಬಿಡುಗಡೆಯಾಗಿಲ್ಲ. ಆದ ಕಾರಣ ರೈತರ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು. ಅಲ್ಲದೇ ಈ ಕುರಿತು ಮುಖ್ಯಮಂತ್ರಿಗಳಿಗೂ ಪತ್ರ ಬರೆದಿದ್ದು, ಶೀಘ್ರದಲ್ಲಿ ರೈತರ ಸಮಸ್ಯೆ ಪರಿಹಾರ ಆಗಬೇಕು ಎಂದು ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.