ಶಿರಸಿ: ಕಿಟಕಿ ಸರಳು ಮುರಿದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಚೇರಿಯಲ್ಲಿ ಕಳ್ಳತನ ನಡೆದಿರುವ ಘಟನೆ ಸೋಮವಾರ ತಡರಾತ್ರಿ ಸಿದ್ದಾಪುರದಲ್ಲಿ ನಡೆದಿದೆ.
ಸಿದ್ದಾಪುರದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಸಂಘದ ಕಚೇರಿಯಲ್ಲಿ ನಗದು ಸೇರಿ 2 ಲಕ್ಷ ಮೌಲ್ಯದ ವಸ್ತುಗಳು ಕಳ್ಳತನವಾಗಿವೆ. ಸಿದ್ದಾಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.