ETV Bharat / state

ನೌಕರಿ ಆಮಿಷವೊಡ್ಡಿ ನಗ್ನ ಫೋಟೋ, ವಿಡಿಯೋ ಮೂಲಕ ಬ್ಲಾಕ್​ಮೇಲ್: ಶಿರಸಿಯಲ್ಲಿ ಮೂವರು ಅಂದರ್​ - sirsi blackmail case

ಸರ್ಕಾರಿ ನೌಕರಿ ಕೊಡಿಸುತ್ತೇನೆಂದು ನಂಬಿಸಿ, ಬಳಿಕ ಬಲವಂತವಾಗಿ ನಗ್ನ ಫೋಟೋ ಹಾಗೂ ವಿಡಿಯೋವನ್ನು ತೆಗೆದುಕೊಂಡು ಬೆದರಿಸಿ ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

three-arrested-for-blackmailing-youth-over-nude-video
ಬ್ಲಾಕ್​ಮೇಲ್ ಪ್ರಕರಣ ಆರೋಪಿಗಳ ಬಂಧನ
author img

By

Published : Feb 3, 2022, 10:04 PM IST

ಶಿರಸಿ(ಉತ್ತರಕನ್ನಡ): ನಗ್ನ ಫೋಟೋ ಹಾಗೂ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುತ್ತೇವೆ ಎಂದು ಯುವಕನಿಗೆ ಹೆದರಿಸಿದ ಮೂವರು ಆರೋಪಿಗಳನ್ನು ಸುಲಿಗೆ ಪ್ರಕರಣದಲ್ಲಿ ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿರಸಿ ತಾಲೂಕಿನ ಉಂಚಳ್ಳಿಯ ಕೆರೆಜಡ್ಡಿಯ ಅಜೀತ ಶ್ರೀಕಾಂತ ನಾಡಿಗ (25), ಬನವಾಸಿ ರಸ್ತೆಯ ಗೋಲಗೇರಿ ಓಣಿಯ ಧನುಶ್ಯ ಕುಮಾರ ದಿಲೀಪಕುಮಾರ ಶೆಟ್ಟಿ (25) ಹಾಗೂ ಶಿವಮೊಗ್ಗದ ಗೋಪಾಲದ ರಂಗನಾಥ ಬಡಾವಣೆಯ ಪದ್ಮಜಾ ಡಿ. ಎನ್. (50) ಅವರ ಮೇಲೆ ಸುಲಿಗೆ (Extortion) ಶಿರಸಿಯ ಹೊಸ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆ ವೃದ್ಧ ದಂಪತಿಯ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್​

ಆರೋಪಿಗಳು ಯುವಕನಿಗೆ ಖಾಯಂ ಸರ್ಕಾರಿ ಉಪನ್ಯಾಸಕ ಹುದ್ದೆ ಕೊಡಿಸುತ್ತೇವೆ ಎಂದು ನಂಬಿಸಿ ಕಳೆದ ಜ. 17ರಂದು ಶಿವಮೊಗ್ಗಕ್ಕೆ ಕರೆಸಿಕೊಂಡು, ಕೋಣೆಯಲ್ಲಿ ಕೂಡಿಹಾಕಿ ನಗ್ನಗೊಳಿಸಿ, ದೂರುದಾರರ ಫೋಟೋ ಹಾಗೂ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ನಂತರ ಜ. 18ರಂದು ದೂರುದಾರರ ತಂದೆಯವರನ್ನು ಭೇಟಿ ಮಾಡಿ, ವಿಡಿಯೋ ಡಿಲೀಟ್ ಮಾಡಬೇಕು ಎಂದಾದರೆ, 15 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಅಲ್ಲದೇ, ಬಲವಂತವಾಗಿ ನಕಲಿ ದಾಖಲೆ ಸೃಷ್ಟಿಸಿ, ಕರಾರು ಪತ್ರ ಬರೆಸಿಕೊಂಡು, ಬ್ಲಾಂಕ್ ಚೆಕ್ ಪಡೆದುಕೊಂಡಿದ್ದರು. ಹಣ ಕೊಡದಿದ್ದರೆ ಕೊಲೆ ಮಾಡಲಾಗುವುದು ಎಂದು ಹೆದರಿಸಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ದೂರು ಬಂದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ಇಲಾಖೆ ವಿಶೇಷ ತಂಡ ರಚಿಸಿ, ಆರೋಪಿಗಳನ್ನು ಹುಡುಕಿ 24 ಗಂಟೆಯೊಳಗೆ ಬಂಧಿಸಿದ್ದಾರೆ. ಈ ಮೂವರ ವಿರುದ್ಧ ಐಪಿಸಿ 386, 388, 406, 384, 342, 423, 506 ಸಹಿತ 34 ಪ್ರಕರಣಗಳು ದಾಖಲಾಗಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.