ETV Bharat / state

ಟಿಕೆಟ್ ಘೋಷಣೆಗೂ ಮುನ್ನವೇ ಬಂಡಾಯ: ರಾಷ್ಟ್ರೀಯ ಪಕ್ಷಗಳಿಗೆ ತಲೆನೋವಾದ ಕುಮಟಾ ಕ್ಷೇತ್ರ - ಈಟಿವಿ ಭಾರತ ಕನ್ನಡ

ಕುಮುಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಟಿಕೆಟ್​ ಘೋಷಣೆಗೂ ಮುನ್ನವೇ ಎರಡೂ ಪಕ್ಷಗಳ ಟಿಕೆಟ್​ ಆಕಾಂಕ್ಷಿಗಳು ಬಂಡಾಯವೆದ್ದಿದ್ದಾರೆ.

ticket-aspirants-rebel-in-kumta-constituency
ಟಿಕೆಟ್ ಘೋಷಣೆಗೂ ಮುನ್ನವೇ ಬಂಡಾಯದ ಬೇಗುದಿ: ರಾಷ್ಟ್ರೀಯ ಪಕ್ಷಗಳಿಗೆ ತಲೆನೋವಾದ ಕುಮಟಾ ಕ್ಷೇತ್ರ
author img

By

Published : Apr 4, 2023, 8:31 PM IST

ಟಿಕೆಟ್ ಘೋಷಣೆಗೂ ಮುನ್ನವೇ ಬಂಡಾಯದ ಬೇಗುದಿ: ರಾಷ್ಟ್ರೀಯ ಪಕ್ಷಗಳಿಗೆ ತಲೆನೋವಾದ ಕುಮಟಾ ಕ್ಷೇತ್ರ

ಕಾರವಾರ : ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿ ವಾರ ಕಳೆದರೂ ಇನ್ನೂ ಕೂಡ ಎಲ್ಲ ಪಕ್ಷಗಳು ಎಲ್ಲೆಡೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಆದರೆ ಉತ್ತರಕನ್ನಡ ಜಿಲ್ಲೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿರುವ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಘೋಷಣೆಗೂ ಮೊದಲೇ ರಾಷ್ಟ್ರೀಯ ಪಕ್ಷಗಳಲ್ಲಿ ಬಂಡಾಯದ ಬೇಗುದಿ ಕಾಣಲಾರಂಭಿಸಿರುವುದು ಕಾರ್ಯಕರ್ತರ ಗೊಂದಲಕ್ಕೆ ಕಾರಣವಾಗಿದೆ.

ಉತ್ತರಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದಲ್ಲಿ ಹೈ ವೋಲ್ಟೇಜ್ ಕ್ಷೇತ್ರವೆಂದೇ ಬಿಂಬಿತವಾಗಿರುವ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ರಾಷ್ಟ್ರೀಯ ಪಕ್ಷಗಳಲ್ಲಿಯೂ ಟಿಕೆಟ್ ಫೈಟ್ ಜೋರಾಗಿದೆ. ಕಾಂಗ್ರೆಸ್​​ನಿಂದ ಈಗಾಗಲೇ 14 ಮಂದಿ ಟಿಕೆಟ್​​ಗಾಗಿ ಅರ್ಜಿ ಸಲ್ಲಿದ್ದಾರೆ. ಆದರೆ‌ ಸದ್ಯ ಇವರೆಲ್ಲರನ್ನು ಬಿಟ್ಟು ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ ಅವರ ಪುತ್ರ ನಿವೇದಿತ್ ಆಳ್ವಾ ಅವರನ್ನು ಕುಮಟಾ ಕ್ಷೇತ್ರದಿಂದ ಕಾಂಗ್ರೆಸ್ ಕಣಕ್ಕಿಳಿಸಲಿದೆ ಎಂದು ಹೇಳಲಾಗುತ್ತಿದೆ.

ಆದರೆ ಕ್ಷೇತ್ರದಲ್ಲಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿ ಮಾಜಿ ಶಾಸಕಿ ಶಾರದಾ ಶೆಟ್ಟಿ, ಮಂಜುನಾಥ ನಾಯ್ಕ, ಶಿವಾನಂದ ಹೆಗಡೆ ಸೇರಿದಂತೆ ಇನ್ನಿತರರು ತಮ್ಮದೇ ಆದ ಪ್ರಯತ್ನ ನಡೆಸಿದ್ದರಾದರೂ ಇದೀಗ ಟಿಕೆಟ್ ಬೇರೆಯವರಿಗೆ ನೀಡುತ್ತಿದ್ದಾರೆ ಎಂಬ ಸುದ್ದಿ ಕೈ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಸಭೆಗಳ ಮೇಲೆ ಸಭೆ ನಡೆಸಿ ಬಹಿರಂಗವಾಗಿಯೇ ಕ್ಷೇತ್ರದಲ್ಲಿರುವ ಕೈ ನಾಯಕರ ಬಿಟ್ಟು ಹೊರಗಿನವರಿಗೆ ಟಿಕೆಟ್ ನೀಡಿದ್ದಲ್ಲಿ ಪಕ್ಷದ ಕಾರ್ಯಕರ್ತರು ತಕ್ಕ ಉತ್ತರ ನೀಡುವುದಾಗಿ ಹೊನ್ನಾವರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸಂದೇಶ ಶೆಟ್ಟಿ ಸಂದೇಶ ಶೆಟ್ಟಿ ಎಚ್ಚರಿಸಿದ್ದಾರೆ.

ಕೆಲಸ ಮಾಡಿದವರಿಗೆ ಟಿಕೆಟ್ ನೀಡಿ: ಇನ್ನು ಕಾಂಗ್ರೆಸ್​​ನಿಂದ ನಿವೇದಿತ್​​ ಆಳ್ವಾ ಹೆಸರು ಕೇಳಿ ಬರುತ್ತಿದ್ದಂತೆ ಎಲ್ಲಾ 13 ಟಿಕೆಟ್ ಆಕಾಂಕ್ಷಿಗಳು ಪಕ್ಷದ ಪ್ರಚಾರದಿಂದ ಹಿಂದೆ ಸರಿದಿದ್ದಾರೆ. ನಿವೇದಿತ್​ ಆಳ್ವಾ ಅವರಿಗೆ ಟಿಕೆಟ್​​ ನೀಡಿದರೆ ಸಾಮೂಹಿಕವಾಗಿ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿಯೂ ಪಕ್ಷದ ಕಾರ್ಯಕರ್ತರು ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೇ ಇದೀಗ ಹೊನ್ನಾವರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸಂದೇಶ ಶೆಟ್ಟಿ ಅವರನ್ನು ಪಕ್ಷದ ಹುದ್ದೆಯಿಂದ ವಜಾಗೊಳಿಸಲಾಗಿದೆ. ಆದರೆ ಸ್ಥಳೀಯ ನಾಯಕರು ಕೋವಿಡ್ ಸಂದರ್ಭದಲ್ಲಿ, ಪರೇಶ್ ಮೇಸ್ತಾ ಗಲಭೆಯಲ್ಲಿ ಹೋರಾಡಿದ್ದಾರೆ. ಅವರನ್ನು ಬಿಟ್ಟು ಬೇರೆಯವರಿಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಪಕ್ಷ ಗೆಲ್ಲುವ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಗಣಪತಿ ಮೇಸ್ತಾ ಹೇಳಿದ್ದಾರೆ.

ಬಿಜೆಪಿಯಲ್ಲೂ ಟಿಕೆಟ್​​ಗಾಗಿ ಲಾಬಿ : ರಾಷ್ಟ್ರೀಯ ಪಕ್ಷ ಬಿಜೆಪಿಯಲ್ಲೂ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿದ್ದು, ಹಾಲಿ ಶಾಸಕ ದಿನಕರ ಶೆಟ್ಟಿಗೆ ಟಿಕೆಟ್ ಕೈತಪ್ಪುವ ಆತಂಕ ಶುರುವಾಗಿದೆ. ಕ್ಷೇತ್ರದಲ್ಲಿ ಬಿಜೆಪಿಯಿಂದಲೂ ಹಲವರು ಟಿಕೆಟ್​​ಗಾಗಿ ರಾಜ್ಯ ನಾಯಕರುಗಳೊಂದಿಗೆ ಸಂಪರ್ಕ ಹೊಂದಿರುವುದು ಇದೀಗ ಕುತೂಹಲ ಮೂಡಿಸಿದೆ. ಅಲ್ಲದೆ ಕುಮಟಾ ಕ್ಷೇತ್ರದ ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಪಕ್ಷದಲ್ಲಿಯೂ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿರುವುದು ಎರಡು ಪಕ್ಷಗಳ ಹೈಕಮಾಂಡ್​​​ಗಳಿಗೂ ತಲೆನೋವಾಗಿ ಪರಿಣಮಿಸಿದೆ.

ಜೆಡಿಎಸ್ ಭರ್ಜರಿ ಪ್ರಚಾರ : ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸೂರಜ್ ನಾಯ್ಕ ಸೋನಿ ಈಗಾಗಲೆ ಕ್ಷೇತ್ರದಲ್ಲಿ ಸಂಚರಿಸಿ ಒಂದು ಸುತ್ತಿನ ಪ್ರಚಾರವನ್ನು ಸಹ ಮುಗಿಸಿದ್ದಾರೆ‌. ರಾಷ್ಟೀಯ ಪಕ್ಷಗಳು ತಮ್ಮ ಪಕ್ಷದ ಅಭ್ಯರ್ಥಿ ಘೋಷಣೆಯಲ್ಲಿ ವಿಳಂಬ ಮಾಡುತ್ತಿರುವುದು ಇದರಿಂದಾಗಿ ಟಿಕೆಟ್ ಆಕಾಂಕ್ಷಿಗಳ‌ ಆತಂಕವನ್ನು ಇನ್ನಷ್ಟು ಹೆಚ್ಚು ಮಾಡಿದೆ.

ಇದನ್ನೂ ಓದಿ : ಬಿ.ಸಿ.ಪಾಟೀಲ್-ಯುಪಿ ಬಣಕಾರ್​ಗೆ ಪ್ರತಿಷ್ಠೆಯ ಕಣ ಹಿರೇಕೆರೂರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.