ಕಾರವಾರ: ಸಾಗರಮಾಲಾ ಯೋಜನೆಯ ವಾಣಿಜ್ಯ ಬಂದರು ವಿಸ್ತರಣೆಗೆ ಮೀನುಗಾರರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಶಾಸಕಿ ರೂಪಾಲಿ ನಾಯ್ಕ ಮನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ವಾಣಿಜ್ಯ ಬಂದರಿನ ಎರಡನೇ ಹಂತದಲ್ಲಿ ಶುರುವಾದ ಅಲೆ ತಡೆಗೋಡೆ ಕಾಮಗಾರಿಯನ್ನು ವಿರೋಧಿಸಿ ಮೀನುಗಾರರು ಕಳೆದ ಎರಡು ದಿನದಿಂದ ಪ್ರತಿಭಟನೆ ನಡೆಸುತ್ತಿದ್ದು, ಇಂದು ಶಾಸಕರು ಹಾಗೂ ಸಂಸದರ ವಿರುದ್ಧವೂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ದೇವಳಿವಾಡ ಬಳಿ ಇರುವ ಶಾಸಕಿ ರೂಪಾಲಿ ನಾಯ್ಕ ಮನೆಗೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಪಿಎಸ್ಐ ಸೇರಿದಂತೆ ಹಲವು ಪೊಲೀಸರು ಶಾಸಕಿ ಮನೆಯ ಎದುರು ಪೋಲಿಸರು ಬೀಡು ಬಿಟ್ಟಿದ್ದಾರೆ. ಅಲ್ಲದೆ ಗಸ್ತು ವಾಹನ ಕೂಡ ತಿರುಗುತ್ತಿದ್ದು, ಯಾವುದೇ ರೀತಿಯ ಪ್ರತಿಭಟನೆ ಅಥವಾ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮವಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.