ETV Bharat / state

ಮುರುಡೇಶ್ವರದಲ್ಲಿ ಸಮುದ್ರದಲೆಗಳಿಗೆ ಕೊಚ್ಚಿ ಹೋಗುತ್ತಿದ್ದ ನಾಲ್ವರು ಪ್ರವಾಸಿಗರ ರಕ್ಷಣೆ! - TOURIST

ಕರ್ತವ್ಯದಲ್ಲಿದ್ದ ಲೈಫ್ ಗಾರ್ಡ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಾಲ್ವರನ್ನು ರಕ್ಷಣೆ ಮಾಡಿದ್ದು, ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪ್ರವಾಸಿಗರ ರಕ್ಷಣೆ
author img

By

Published : Oct 8, 2019, 4:46 PM IST

ಕಾರವಾರ: ಕಡಲ ತೀರದಲ್ಲಿ ಈಜಾಡುತ್ತಿರುವಾಗ ಅಲೆಗಳ ರಭಸಕ್ಕೆ ಸಿಕ್ಕಿ ಕೊಚ್ಚಿ ಹೋಗುತ್ತಿದ್ದ ನಾಲ್ವರು ಪ್ರವಾಸಿಗರನ್ನು ರಕ್ಷಿಸಿದ ಘಟನೆ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಡೆದಿದೆ.

ಚಿತ್ರದುರ್ಗದಿಂದ ಪ್ರವಾಸಕ್ಕೆಂದು ಒಟ್ಟು ಎಂಟು ಮಂದಿ ಮುರುಡೇಶ್ವರಕ್ಕೆ ಬಂದಿದ್ದರು. ನಂತರ ಅಲ್ಲಿನ ಕಡಲ ತೀರಕ್ಕೆ ಈಜಾಡಲೆಂದು ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ಒಟ್ಟು ಎಂಟು ಮಂದಿಯಲ್ಲಿ ಕಾವ್ಯ, ಪಲ್ಲವಿ, ಚಂದ್ರಶೇಖರ ಹಾಗೂ ಬಸವರಾಜ್ ಎಂಬುವವರು ಅಲೆಗಳ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದರು. ಈ ವೇಳೆ ಒಬ್ಬರನ್ನೊಬ್ಬರು ರಕ್ಷಿಸಲು ಹೋಗಿ ನಾಲ್ವರು ನೀರುಪಾಲಾಗುವ ಹಂತದಲ್ಲಿದ್ದರು.

ತಕ್ಷಣವೇ ಕರ್ತವ್ಯದಲ್ಲಿದ್ದ ಲೈಫ್ ಗಾರ್ಡ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಾಲ್ವರನ್ನು ರಕ್ಷಣೆ ಮಾಡಿದ್ದಾರೆ. ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲೈಫ್ ಗಾರ್ಡ್ ಸಿಬ್ಬಂದಿ ಜೈರಾಮ್, ಶ್ರೀಕಾಂತ್, ರವಿ, ಚಂದ್ರಶೇಖರ್ ಹಾಗೂ ಪ್ರವಾಸಿ ಮಿತ್ರ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಾಲ್ವರನ್ನು ರಕ್ಷಣೆ ಮಾಡಿದ್ದು, ಈ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:ಸಮುದ್ರದಲ್ಲಿ ಕೊಚ್ಚಿಹೋಗುತ್ತಿದ್ದ ನಾಲ್ವರು ಪ್ರವಾಸಿಗರ ರಕ್ಷಣೆ

ಕಾರವಾರ: ಕಡಲತೀರದಲ್ಲಿ ಈಜಾಡುತ್ತಿರುವಾಗ ಅಲೆಗಳ ರಭಸಕ್ಕೆ ಸಿಕ್ಕಿ ಕೊಚ್ಚಿ ಹೋಗುತ್ತಿದ್ದ ನಾಲ್ವರು ಪ್ರವಾಸಿಗರನ್ನು ರಕ್ಷಣೆ ಮಾಡಿರುವ ಘಟನೆ ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಇಂದು ನಡೆದಿದೆ.
ಚಿತ್ರದುರ್ಗದಿಂದ ಪ್ರವಾಸಕ್ಕೆಂದು ಬಂದಿದ್ದ ಒಟ್ಟು ಎಂಟು ಮಂದಿಯ ಪೈಕಿ ಇಬ್ಬರು ಯುವತಿಯರು ಹಾಗೂ ಇಬ್ಬರು ಯುವಕರು ಅಲೆಗಳ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದರು. ಈ ವೇಳೆ ಒಬ್ಬರನ್ನೊಬ್ಬರು ರಕ್ಷಿಸಲು ಹೋಗಿ ನಾಲ್ವರು ನೀರುಪಾಲಾಗಿದ್ದರು. ತಕ್ಷಣ ಕರ್ತವ್ಯದಲ್ಲಿದ್ದ ಲೈಫ್ ಗಾರ್ಡ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾವ್ಯ, ಪಲ್ಲವಿ, ಚಂದ್ರಶೇಖರ ಹಾಗೂ ಬಸವರಾಜ್ ಎಂಬುವವರನ್ನು ರಕ್ಷಣೆ ಮಾಡಿದ್ದಾರೆ.
ಈ ವೇಳೆ ಲೈಫ್ ಗಾರ್ಡ್ ಸಿಬ್ಬಂದಿ ಜೈರಾಮ್, ಶ್ರೀಕಾಂತ, ರವಿ, ಚಂದ್ರಶೇಖರ್ ಹಾಗೂ ಪ್ರವಾಸಿ ಮಿತ್ರ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಾಲ್ವರನ್ನು ರಕ್ಷಣೆ ಮಾಡಿದ್ದಾರೆ. ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.