ETV Bharat / state

ಪಿಎಫ್ಐ ಹಾಗೂ ಎಸ್​ಡಿಪಿಐ ಮೇಲೆ ನಿಗಾ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಾಂತಿ ಕದಡುವ ಕೆಲಸ ಮಾಡುವ ಸಂಘಟನೆಗಳನ್ನು ನಿಷೇಧಿಸುವ ನಿರ್ಣಯವನ್ನು ಕೇಂದ್ರ ಸರ್ಕಾರ ಕೈಗೊಳ್ಳಬೇಕು. ನಾವು ಅದನ್ನು ನಿಯಂತ್ರಿಸುವ ಕೆಲಸ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಪಿ.ಎಫ್.ಐ., ಎಸ್.ಡಿ.ಪಿ.ಐ. ಸಂಘಟನೆಗಳನ್ನು ನಿಷೇಧ ಮಾಡುವ ಬದಲು ಅವರ ಕಾರ್ಯಚಟುವಟಿಕೆ ಮೇಲೆ ನಿಗಾ ಇಡುವುದು ಮುಖ್ಯವಾಗಿದೆ. ಆ ಕೆಲಸ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

Home Minister Araga Jnanendra
ಗೃಹ ಸಚಿವ ಆರಗ ಜ್ಞಾನೇಂದ್ರ
author img

By

Published : Mar 6, 2022, 3:03 PM IST

ಶಿರಸಿ(ಉತ್ತರ ಕನ್ನಡ): ರಾಜ್ಯದಲ್ಲಿ ಪಿ.ಎಫ್.ಐ., ಎಸ್.ಡಿ.ಪಿ.ಐ. ಸಂಘಟನೆಗಳನ್ನು ನಿಷೇಧಿಸುವ ಬದಲು ಅವರ ಕಾರ್ಯಚಟುವಟಿಕೆ ಮೇಲೆ ನಿಗಾ ಇಡುವುದು ಮುಖ್ಯವಾಗಿದೆ. ಆ ಕೆಲಸ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು

ಭಾನುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಂತಿ ಕದಡುವ ಕೆಲಸ ಮಾಡುವ ಸಂಘಟನೆಗಳನ್ನು ನಿಷೇಧಿಸುವ ನಿರ್ಣಯವನ್ನು ಕೇಂದ್ರ ಸರ್ಕಾರ ಕೈಗೊಳ್ಳಬೇಕು. ನಾವು ಅದನ್ನು ನಿಯಂತ್ರಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಪಿ.ಎಫ್.ಐ., ಎಸ್.ಡಿ.ಪಿ.ಐ. ಸಂಘಟನೆಗಳ ಕಾರ್ಯಚಟುವಟಿಕೆಯ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಲಾಗುತ್ತಿದೆ ಎಂದ ಸಚಿವರು, ಶಿವಮೊಗ್ಗ, ಆಳಂದ ಘಟನೆ ಹೊರತುಪಡಿಸಿದರೆ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಉತ್ತಮವಾಗಿದೆ ಎಂದು ತಿಳಿಸಿದರು.

ಚುನಾವಣೆ ಸಮಿಪಿಸಿದಾಗ ಸಣ್ಣಪುಟ್ಟ ಘಟನೆಗಳು ರಾಜಕೀಯ ತಿರುವು ಪಡೆದುಕೊಳ್ಳುವುದು ಸಹಜ. ಎಲ್ಲ ರಾಜಕೀಯ ಪಕ್ಷಗಳು ಘಟನೆಗಳ ಲಾಭ ಪಡೆಯಲು ಹವಣಿಸುತ್ತವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.