ಕಾರವಾರ: ನಗರದ ರವೀಂದ್ರನಾಥ ಟ್ಯಾಗೋರ್ ಕಡಲ ತೀರದ ಬಳಿ ಅಪರಿಚಿತ ಶವವೊಂದು ಪತ್ತೆಯಾಗಿದೆ.
ಮೃತ ವ್ಯಕ್ತಿಗೆ ಸುಮಾರು 50 ವರ್ಷ ವಯಸ್ಸಿರಬಹುದು ಎಂದು ಅಂದಾಜಿಸಲಾಗಿದೆ. ಯಾರು ಎಂಬುದು ಇನ್ನೂ ತಿಳಿದು ಬಂದಿಲ್ಲ. ಕಪ್ಪು ಅಂಗಿ ಹಾಗೂ ತಿಳಿ ನೀಲಿ ಬಣ್ಣದ ಫ್ಯಾಂಟ್ ಧರಿಸಿದ್ದಾರೆ. ಎಲ್ಲೋ ಬಿದ್ದಿರುವ ಶವ ತಡರಾತ್ರಿ ತೇಲಿ ಬಂದಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ತೆರಳಿದ ಪೊಲೀಸರು ಮೃತದೇಹವನ್ನು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ. ಇನ್ನು ಶವದ ಗುರುತು ಸಿಕ್ಕಲ್ಲಿ ತಕ್ಷಣ ಹತ್ತಿರದ ಪೊಲೀಸ್ ಠಾಣೆ ಇಲ್ಲವೇ ಕಾರವಾರ ನಗರ ಠಾಣೆಯನ್ನು ಸಂಪರ್ಕಿಸಲು ಕೋರಿದ್ದಾರೆ.