ಶಿರಸಿ:ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಶಿರಸಿ ಪೊಲೀಸರು ಬಂಧಿಸಿದ್ದು, 378 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ಶಿರಸಿ ತಾಲೂಕಿನ ನಿರ್ನಳ್ಳಿ ಕ್ರಾಸ್ ಬಳಿ ನಡೆದಿದೆ.
ನಗರದ ಮರಾಠಿಕೊಪ್ಪದ ನಾಗರಾಜ ಲಕ್ಷ್ಮಣ ವಾಲ್ಮೀಕಿ ಹಾಗೂ ನೆಹರು ನಗರದ ದೀಪಕ ಕೇರಳಕರ್ ಬಂಧಿತ ಆರೋಪಿಗಳು. ಇವರು ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಇನ್ನು ಬಂಧಿತರಿಂದ 7,560 ರೂ. ಮೌಲ್ಯದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದು, ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.