ಕಾರವಾರ: ಉತ್ತರಕನ್ನಡ ಜಿಲ್ಲೆಯ ವಿವಿಧೆಡೆ ಸಂಜೆ ವೇಳೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ.
ಜಿಲ್ಲೆಯ ಕಾರವಾರ, ಕುಮಟಾ, ಹಳಿಯಾಳ, ಯಲ್ಲಾಪುರ ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಸಂಜೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಹಳಿಯಾಳ ಪಟ್ಟಣದ ಶೆಟ್ಟಿಗೇರಿಯಲ್ಲಿ ಸಂಜೆ ಸಿಡಿಲು ಬಡಿದ ಪರಿಣಾಮ ಎರಡು ಮರಗಳು ಹೊತ್ತಿ ಉರಿದಿವೆ.
![ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರಗಳು](https://etvbharatimages.akamaized.net/etvbharat/prod-images/kn-kwr-05-sidilu-malle-7202800_20042020205014_2004f_1587396014_869.jpg)
ಅಕ್ಕಪಕ್ಕದ ಮೂರು ಮನೆಗಳ ವಿದ್ಯುತ್ ವೈರ್ಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಕಾರವಾರದಲ್ಲಿಯೂ ಮಳೆಯ ಆರ್ಭಟ ಜೋರಾಗಿತ್ತು.