ಕಾರವಾರ: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಂಕೋಲಾ ತಾಲೂಕಿನ ಹೆಬ್ಬುಳ ಬಳಿ ನಡೆದಿದೆ.
![Two dead in car and lorry accident](https://etvbharatimages.akamaized.net/etvbharat/prod-images/4657221_thumbkwr.jpg)
ಕಾರವಾರ ಮೂಲದ ಚಂದ್ರಮೌಳಿ(55) ಹಾಗೂ ರಾಘವೇಂದ್ರ (25) ಎಂಬುವವರು ಮೃತ ದುರ್ದೈವಿಗಳು. ಬೆಂಗಳೂರಿನಿಂದ ಕಾರವಾರಕ್ಕೆ ಆಗಮಿಸುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ನುಜ್ಜುಗುಜ್ಜಾಗಿದ್ದು, ಕಾರಿನ ಮುಂಬದಿ ಕುಳಿತಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಹಿಂಬದಿ ಕುಳಿತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.