ಶಿರಸಿ: ಹಾವು ಕಡಿದು ಎರಡು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಶಿರಸಿ ತಾಲೂಕಿನ ದಾಸನಕೊಪ್ಪದಲ್ಲಿ ನಡೆದಿದೆ.
ಎರಡು ವರ್ಷದ ತರಾನ್ ಶೇಖ್ ಮೃತ ಬಾಲಕ. ಈತ ದಾಸನಕೊಪ್ಪ ಕ್ರಾಸ್ನಲ್ಲಿರುವ ತನ್ನ ಮನೆಯ ಸಮೀಪ ಆಟವಾಡುತ್ತಿದ್ದಾಗ ಹಾವು ಕಡಿದಿದೆ. ತಕ್ಷಣವೇ ಬಾಲಕನನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದಾದರೂ ಈ ವೇಳೆ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಸೆಲ್ಫಿ ತಂದ ಆಪತ್ತು... ಬೆಳಗಾವಿಯ ಕಿತವಾಡ ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ನಾಲ್ವರು ಯುವತಿಯರ ಸಾವು!