ಕಾರವಾರ : ಕೋವಿಡ್-19 ಸಂಕಷ್ಟದ ಹಿನ್ನೆಲೆ ಶಾಲೆಗಳು ಪ್ರಾರಂಭವಾಗದೆ ಕೆಲಸವಿಲ್ಲದೇ ಖಾಲಿಯಿರುವ ಅನುದಾನರಹಿತ ಶಾಲೆಗಳ ಶಿಕ್ಷಕರು ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ವೇತನ ಭರಿಸುವುದು, 1995ರ ನಂತರ ಆರಂಭವಾದ ಕನ್ನಡ ಶಾಲಾ-ಕಾಲೇಜುಗಳಿಗೆ ಅನುದಾನ ವಿಸ್ತರಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಇಂದು ಮನವಿ ಸಲ್ಲಿಸಿದರು.