ETV Bharat / state

ಹೊನ್ನಾವರ ಠಾಣೆಯಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ: CPI ಸೇರಿ ಐವರು ಪೊಲೀಸರು ಅಮಾನತು

ಹೊನ್ನಾವರ ಪೊಲೀಸ್ ಠಾಣೆಯಲ್ಲಿ ವಿಚಾರಣಾಧೀನ ಕೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧ ಸಿಪಿಐ ಸೇರಿ ಐವರು ಪೊಲೀಸ್​ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಲಾಗಿದೆ.

Undertrial prisoner commits suicide
ದಿಲೀಪ ಮಂಡೇಲ್ ಆತ್ಮಹತ್ಯೆಗೆ ಶರಣಾದ ವಿಚಾರಣಾಧೀನ ಕೈದಿ
author img

By

Published : Jun 25, 2023, 1:01 PM IST

ಕಾರವಾರ: ಕಳ್ಳತನ ಪ್ರಕರಣದ ಆರೋಪದಡಿ ವಿಚಾರಣೆಗೆ ಕರೆ ತಂದಿದ್ದ ಕೈದಿಯೋರ್ವ ಪೊಲೀಸ್ ಠಾಣೆಯಲ್ಲಿ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಬಿಹಾರ ಮೂಲದ ದಿಲೀಪ ಮಂಡೇಲ್ ಆತ್ಮಹತ್ಯೆಗೆ ಶರಣಾದ ವಿಚಾರಣಾಧೀನ ಕೈದಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಲಾಗಿದೆ.

ಪ್ರಕರಣದ ಸಂಪೂರ್ಣ ವಿವರ: ಹೊನ್ನಾವರ ಪಟ್ಟಣದ ಸಾಲೆಹಿತ್ತಲ್ ಮನೆಯಲ್ಲಿ ಬಂಗಾರ ಕಳ್ಳತನ ಪ್ರಕರಣ ಪತ್ತೆ ಕಾರ್ಯದಲ್ಲಿರುವಾಗ ಚಿನ್ನಕ್ಕೆ ಹೊಳಪು ನೀಡುತ್ತೇವೆ ಎಂದು ಮೃತ ವ್ಯಕ್ತಿಯು ತಂದೆಯ ಜತೆ ಪಟ್ಟಣದಲ್ಲಿ ವಂಚಿಸಲು ಯತ್ನಿಸುತ್ತಿದ್ದಾರೆ ಎಂದು ಸಾರ್ವಜನಿಕರಿಂದ ಬಂದ ದೂರನ್ನು ಆಧರಿಸಿ ವಿಚಾರಣೆಗೆ ಕರೆತರಲಾಗಿತ್ತು. ವಿಚಾರಣೆಯ ಹಂತದಲ್ಲಿರುವಾಗ ಆರೋಪಿತ ನೀರು ಕುಡಿಯುತ್ತೇನೆ ಎಂದು ಬ್ಯಾಗ್‌ನಲ್ಲಿ ತಂದಿದ್ದ ಸೈನೆಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಳಿಕ ಆತನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾರಾಗೃಹದ ಕಿಟಕಿಗೆ ನೇಣು ಬಿಗಿದುಕೊಂಡು ವಿಚಾರಣಾಧೀನ ಕೈದಿ ಆತ್ಮಹತ್ಯೆ

ಐವರು ಪೊಲೀಸರು ಅಮಾನತು: ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಡಿವೈಎಸ್​ಪಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ ವಿಚಾರಣೆ ನಡೆಸಿದ್ದರು. ನಂತರ ಮಂಗಳೂರು ವಲಯದ ಐಜಿ ಚಂದ್ರಗುಪ್ತ ಸುದೀರ್ಘ ಎರಡು ಗಂಟೆಯ ವಿಚಾರಣೆಯ ಬಳಿಕ ಸಿಪಿಐ ಮಂಜುನಾಥ ಇ.ಒ, ಪಿಎಸ್​​ಐ ಮಂಜೇಶ್ವರ ಚಂದಾವರ, ಸಿಬ್ಬಂದಿಗಳಾದ ಸಂತೋಷ, ರಮೇಶ ಲಂಬಾಣಿ ಹಾಗೂ ಮಹಾವೀರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಮೃತದೇಹವನ್ನು ತಾಲೂಕು ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಇಂದು ಮಾಜಿಸ್ಟೇಟ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ಈ ಪ್ರಕರಣ ಸಂಬಂಧಿಸಿದಂತೆ ಮಾನವ ಹಕ್ಕು ಆಯೋಗ, ಸಿ.ಐ.ಡಿ ಅಧಿಕಾರಿಗಳು ಪ್ರಕರಣದ ವಿಚಾರಣೆಗೆ ಇಂದು ಆಗಮಿಸುವ ಸಾಧ್ಯತೆ ಇದೆ. ತನಿಖೆಯ ಬಳಿಕ ಪ್ರಕರಣದ ಸತ್ಯಾಸತ್ಯತೆ ಬೆಳಕಿಗೆ ಬರಲಿದೆ.

ಇದನ್ನೂ ಓದಿ: ವಿಚಾರಣಾಧೀನ ಕೈದಿ ಆತ್ಮಹತ್ಯೆ ಪ್ರಕರಣ: ಸಾವಿಗೆ ಜೈಲಾಧಿಕಾರಿಗಳೇ ಕಾರಣವಾ..? ಕುಟುಂಬಸ್ಥರ ಆರೋಪವೇನು..?

ಜೈಲಿನಲ್ಲಿ ಕೈದಿ ಆತ್ಮಹತ್ಯೆ: ಇತ್ತೀಚೆಗೆ ಉಡುಪಿ ಜಿಲ್ಲೆಯ ಸಬ್ ಜೈಲಿನಲ್ಲಿ ಸದಾನಂದ ಸೇರಿಗಾರ್ ಎಂಬ ಕೈದಿ ವಿಚಾರಣಾ ದಿನದಂದು ಆತ್ಮಹತ್ಯೆ ಮಾಡಿಕೊಂಡಿದ್ದ. 20 ಮಂದಿ ಕೈದಿಗಳಿದ್ದ ಕೊಠಡಿಯಲ್ಲಿ ಪಂಚೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಘಟನೆಯನ್ನು ಸಹ ಕೈದಿಗಳು ಗಮನಿಸಿ ನೇಣಿನ ಕುಣಿಕೆಯಿಂದ ಬಿಡಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿ ಆರೋಪಿ ಸಾವನ್ನಪ್ಪಿದ್ದ.

ಮೃತ ಆರೋಪಿ ಕಾರ್ಕಳ ಮೂಲದ ಸದಾನಂದ ಸೇರಿಗಾರ್ ಸರ್ವೇಯರ್ ಆಗಿ ಕೆಲಸ ಮಾಡುತ್ತಿದ್ದ. ಸಿನಿಮಾ ಮಾದರಿಯಲ್ಲಿ ಕೊಲೆ ಮಾಡಿ ಗಮನಸೆಳೆದಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಸದಾನಂದ ಸೇರಿಗಾರ್​, ಸುಟ್ಟ ಕಾರಿನಲ್ಲಿ ತಾನೇ ಸತ್ತಿರುವುದಾಗಿ ಬಿಂಬಿಸಲು ಹೊರಟು ಬಂಧಿಯಾಗಿದ್ದ.

ಇದನ್ನೂ ಓದಿ: ಉಡುಪಿ: ಜೈಲಿನಲ್ಲಿ ಕೈದಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.