ಕಾರವಾರ (ಉತ್ತರ ಕನ್ನಡ) : ಪ್ರಧಾನಿ ನರೇಂದ್ರ ಮೋದಿ ಮೇ 3 ರಂದು ಜಿಲ್ಲೆಗೆ ಆಗಮಿಸುವುದು ಬಹುತೇಕ ಖಚಿತವಾಗಿದ್ದು, ಸಮಾವೇಶಕ್ಕೆ 3 ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆ ಇದೆ ಎಂದು ಕೇಂದ್ರ ಸಚಿವ ಶ್ರೀಪಾದ ನಾಯ್ಕ ಹೇಳಿದರು.
ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಬುಧವಾರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಜಿಲ್ಲೆ ಭೇಟಿ ಬಳಿಕ ಚುನಾವಣಾ ಚಿತ್ರಣ ಬದಲಾಗಲಿದೆ. ಇದರಿಂದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಉತ್ಸಾಹ ಹೆಚ್ಚಾಗಲಿದೆ ಎಂದರು.
ಅಂಕೋಲಾದ ಬಳಿ ನೌಕಾನೆಲೆಯ ಪ್ರದೇಶದಲ್ಲಿ ನರೇಂದ್ರ ಮೋದಿಯವರ ಸಮಾವೇಶ ಮಾಡುವುದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಮಾಡುವುದಾಗಿ ತಿಳಿಸಿದೆ. ಆದರೆ ಈಗಾಗಲೇ ಪಕ್ಷವೂ ನೌಕಾನೆಲೆ ಅಧಿಕಾರಿಗಳೊಂದಿಗೆ ಮಾತನಾಡಿ ಅನುಮತಿ ಪಡೆದುಕೊಂಡೇ ಸಮಾವೇಶ ಹಮ್ಮಿಕೊಳ್ಳುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ : ಎಪ್ರಿಲ್ 30ಕ್ಕೆ ಕೋಲಾರದಲ್ಲಿ ಪ್ರಧಾನಿ ಮೋದಿ ಸಮಾವೇಶ : ಭರ್ಜರಿ ಸಿದ್ಧತೆ
ಮೋದಿ ಭೇಟಿ ಬಳಿಕ ಕಾರ್ಯಕರ್ತರ ಉತ್ಸಾಹ ಇಮ್ಮಡಿ : ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಕಾರ್ಯಕರ್ತರ ಉತ್ಸಾಹ ಇಮ್ಮಡಿಯಾಗಲಿದೆ. ಇದರಿಂದ ಪ್ರಚಾರ ಕಾರ್ಯವೂ ಉತ್ತಮವಾಗಲಿದೆ. ಈಗಾಗಲೇ ಜಿಲ್ಲೆಯಲ್ಲಿ ಬಿಜೆಪಿಯು ಉತ್ತಮ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಉತ್ತರ ಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ಕೇಂದ್ರದ ಯೋಜನೆಗಳಲ್ಲಿ ಮುಸಲ್ಮಾನರನ್ನು ಹೊರಗಿಟ್ಟಿದ್ದು ತೋರಿಸಿದರೆ ರಾಜಕೀಯ ನಿವೃತ್ತಿ: ರಾಜೀವ್ ಚಂದ್ರಶೇಖರ್ ಸವಾಲು
ಮಹಾದಾಯಿ ವಿಷಯದಲ್ಲಿ ನ್ಯಾಯಾಲಯದ ತೀರ್ಪಿಗೆ ಬದ್ಧ: ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿಯು 8 ವರ್ಷಗಳಾದರೂ ಪೂರ್ಣವಾಗದೇ ಇರುವುದು ಬೇಸರ ತಂದಿದೆ. ಜತೆಗೆ ಕಾರವಾರದಲ್ಲಿ ಕೇಂದ್ರ ಸರ್ಕಾರದ ಸೀಬರ್ಡ್ ಹಾಗೂ ಕೈಗಾದಂತೆ ಎರಡು ಯೋಜನೆಗಳಿದ್ದರೂ ಸ್ಥಳೀಯರಿಗೆ ಉದ್ಯೋಗ ನೀಡದಿರುವುದು ಸರಿಯಲ್ಲ. ಈ ಬಗ್ಗೆ ಕೇಂದ್ರದ ಮಂತ್ರಿಗಳೊಂದಿಗೆ ಮಾತನಾಡುತ್ತೇನೆ ಎಂದು ಸಚಿವರು ಹೇಳಿದರು. ಇನ್ನು ಮಹಾದಾಯಿ ಯೋಜನೆ ಬಗ್ಗೆ ಮಾತನಾಡಿ, ಗೋವಾ ರಾಜ್ಯ ಮುಕ್ಕಾಲು ಭಾಗ ಮಹಾದಾಯಿ ನೀರಿನ ಮೇಲೆ ಅವಲಂಬಿತವಾಗಿದೆ. ನಾವು ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ. ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿರುತ್ತೇವೆ ಎಂದು ಹೇಳಿದ್ರು.
ಇದನ್ನೂ ಓದಿ: ಎಪ್ರಿಲ್ 30ಕ್ಕೆ ಕೋಲಾರದಲ್ಲಿ ಪ್ರಧಾನಿ ಮೋದಿ ಸಮಾವೇಶ : ಭರ್ಜರಿ ಸಿದ್ಧತೆ
ಜಗದೀಶ ಶೆಟ್ಟರ್, ಸವದಿ ಸೋಲಿಸುವುದು ಅನಿವಾರ್ಯ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಪಕ್ಷ ಉತ್ತಮ ಸ್ಥಾನಮಾನಗಳನ್ನು ನೀಡಿತ್ತು. ಆದರೆ ಚುನಾವಣೆಯಲ್ಲಿ ಯುವಕರಿಗೆ ಆದ್ಯತೆ ನೀಡಿ ಹಿಂದೆ ಸರಿಯುವಂತೆ ಸೂಚಿಸಿತ್ತು. ಅವರು ಇದೀಗ ಬೇರೆ ಪಕ್ಷ ಸೇರ್ಪಡೆಯಾಗಿರುವುದು ಸರಿಯಲ್ಲ. ನಮ್ಮ ವಿರೋಧ ಪಕ್ಷದಲ್ಲಿರುವುದರಿಂದ ಅವರನ್ನು ಸೋಲಿಸುವುದು ಅವಶ್ಯಕ ಹಾಗೂ ಅನಿವಾರ್ಯವಾಗಿದೆ ಎಂದು ಶ್ರೀಪಾದ ನಾಯ್ಕ ತಿಳಿಸಿದರು.
ಇದನ್ನೂ ಓದಿ : ಅಮಿತ್ ಶಾ ಪ್ರಚೋದಾನಾತ್ಮಕ ಹೇಳಿಕೆ ನೀಡುವುದನ್ನು ನಿಲ್ಲಿಸಲಿ: ಮಲ್ಲಿಕಾರ್ಜುನ ಖರ್ಗೆ