ಕಾರವಾರ: ಸುಮಾರು 50 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವವೊಂದು ಭಟ್ಕಳ ತಾಲೂಕಿನ ಮುರುಡೇಶ್ವರ ಜನತಾ ಕಾಲೋನಿಯಲ್ಲಿ ಇಂದು ಪತ್ತೆಯಾಗಿದೆ.
ಮೃತ ವ್ಯಕ್ತಿಯು ಅತಿಯಾದ ಕುಡಿತ ಹಾಗೂ ಹಸಿವಿನಿಂದ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ. ಶವವನ್ನು ಭಟ್ಕಳ ಸರ್ಕಾರಿ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ. ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.