ಕಾರವಾರ: ಇಲ್ಲಿನ ವೈದ್ಯಕೀಯ ಮಹಾವಿದ್ಯಾಲಯದ ಕೊರೊನಾ ವಾರ್ಡ್ನಲ್ಲಿ ದಾಖಲಾಗಿದ್ದ 9 ಮಂದಿ ಸೋಂಕಿತರು ಗುಣಮುಖರಾದ ಹಿನ್ನೆಲೆಯಲ್ಲಿ ಇಂದು ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಗುಣಮುಖರಾದವರ ಪೈಕಿ 4 ವರ್ಷದ ಬಾಲಕ, 6 ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆಯರಿದ್ದಾರೆ. ಶಿರಸಿ, ಹಳಿಯಾಳ, ಸಿದ್ಧಾಪುರ ಹಾಗೂ ಕುಮಟಾದವರಾದ ಇವರು ಸೋಂಕು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಬಳಿಕ ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಪುಷ್ಪ ಹಾಗೂ ಪ್ರಮಾಣಪತ್ರ ನೀಡಿ ಬೀಳ್ಕೊಡಲಾಯಿತು.
ಉತ್ತರಕನ್ನಡ ಜಿಲ್ಲೆಯಲ್ಲಿ ಪತ್ತೆಯಾಗಿದ್ದ ಒಟ್ಟು 96 ಸೋಂಕಿತರ ಪೈಕಿ 70 ಮಂದಿ ಗುಣಮುಖರಾಗಿದ್ದು, ಇನ್ನೂ 14 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.