ಕಾರವಾರ: ಉತ್ತರಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ತಲೆನೋವು ಹಾಗೂ ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಪಾಸಣೆಗೊಳಗಾಗಿದ್ದರು ಎನ್ನಲಾಗಿದೆ. ಅದರಂತೆ ಸೋಮವಾರದ ವರದಿ ಬಂದಿದ್ದು, ಪಾಸಿಟಿವ್ ಇರುವುದು ದೃಢಪಟ್ಟಿದೆ. ಹೀಗಾಗಿ, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.