ಬೆಂಗಳೂರು: ಜಿಲ್ಲೆಯ ಜೋಯ್ಡ ತಾಲೂಕಿನ ಕಾಳಿ ನದಿ ಯೋಜನೆಯ 1ನೇ ಹಂತ ಸೂಪಾ ಅಣೆಕಟ್ಟಿನ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದ್ದು ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಜಲಾಶಯದ ಗರಿಷ್ಟ ನೀರಿನ ಮಟ್ಟ 564 ಮೀಟರ್ ಆಗಿದ್ದು ಮತ್ತು ಈಗಿನ ನೀರಿನ ಮಟ್ಟ ಬೆಳಗ್ಗೆ 8 ಗಂಟೆಗೆ 550.68 ಮೀಟರ್ ಇದೆ.
ಇದೇ ರೀತಿಯಲ್ಲಿ ಜಲಾಶಯಕ್ಕೆ ನೀರಿನ ಒಳ ಹರಿವು ಮುಂದುವರಿದಲ್ಲಿ ಜಲಾಶಯವು ಗರಿಷ್ಟ ಮಟ್ಟ ತಲುಪುವ ಸಾಧ್ಯತೆ ಇದೆ. ಆದ್ದರಿಂದ ಅಣೆಕಟ್ಟಿನ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗಿವುದು ಎಂದು ಕೆಪಿಸಿಎಲ್ ತಿಳಿಸಿದೆ.
ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಪಾತ್ರದುದ್ದಕ್ಕೂ ವಾಸಿಸುತ್ತಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಜಿಲ್ಲಾಡಳಿತ ನಿಗದಿಪಡಿಸಿರುವ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಮನವಿ ಮಾಡಲಾಗಿದೆ. ಸೂಪಾ ಅಣೆಕಟ್ಟಿನ ಕೆಳಭಾಗದ ನದಿಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ ಮತ್ತು ಮತ್ತು ಇತರೆ ಚಟುವಟಿಕೆಗಳನ್ನು ಮಳೆಗಾಲದ ಅವಧಿಯಲ್ಲಿ ಮಾಡದಂತೆ ವಿನಂತಿಸಲಾಗಿದೆ.
ಇದನ್ನೂ ಓದಿ: ಹಾವೇರಿಯ ಐತಿಹಾಸಿಕ ಹೆಗ್ಗೇರಿ ಕೆರೆಗೆ ಬೇಕಿದೆ ಕಾಯಕಲ್ಪ