ಕಾರವಾರ: ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಇಂದು ಜಿಲ್ಲೆಯಾದ್ಯಂತ ಅದ್ಧೂರಿಯಾಗಿ ಆಚರಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ, ಜಿಲ್ಲಾಧಿಕಾರಿ ಕಚೇರಿ ಎದುರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಿಲ್ಲಾ ಪಂಚಾಯಿತಿ ಸಿಇಓ ಎಂ.ರೋಶನ್ ಚಾಲನೆ ನೀಡಿದರು.
ಮೆರವಣಿಗೆ ನಗರದ ಪ್ರಮುಖ ರಸ್ತೆಯಲ್ಲಿ ಸಂಚರಿಸಿದ್ದು, ಕಲಾ ತಂಡಗಳಿಂದ ಗೊಂಬೆ ಕುಣಿತ, ಡೋಲು ಕುಣಿತ, ಸಿದ್ದಿ ಮಹಿಳೆಯ ದಮಾಮಿ ನೃತ್ಯ ಎಲ್ಲರ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮಾಜದವರು ಸೇರಿದಂತೆ ಸಾರ್ವಜನಿಕರು, ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.