ಕಾರವಾರ(ಉತ್ತರಕನ್ನಡ) : ನಗರದ ಖಾಸಗಿ ಹೋಟೆಲ್ನಲ್ಲಿ ಕಂದಾಯ ಇಲಾಖೆ ಉದ್ಯೋಗಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಹೊನ್ನಾವರ ಮೂಲದ ಕಾರವಾರದ ಎಸಿ ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಈಶ್ವರ ಭಟ್ (38) ಮೃತ ವ್ಯಕ್ತಿ.
ನಗರದ ಖಾಸಗಿ ಹೋಟೆಲ್ನಲ್ಲಿ ರೂಮ್ ಪಡೆದಿದ್ದ ಈಶ್ವರ ಅನಾರೋಗ್ಯದ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿ ಪತ್ನಿ ಹಾಗೂ ಪೊಲೀಸರಿಗೆ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಹಿರಿಯೂರಿನ ಟೋಲ್ ಗೇಟ್ನಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
'ನಾನು ನಿಮಗಾಗಿ ಆಸ್ತಿ ಮಾಡಿಲ್ಲ, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಬೇಕು' ಎಂದು ಪತ್ನಿಗೆ ಪತ್ರದಲ್ಲಿ ಕ್ಷಮೆಯಾಚನೆ ಮಾಡಿದ್ದಾರೆ. ಈ ಬಗ್ಗೆ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.