ETV Bharat / state

ಗೆದ್ದ ಬಳಿಕ ಗ್ರಾಮಕ್ಕೆ ಬಾರದ ಶಾಸಕಿ: ಬಿಜೆಪಿ ಮುಖಂಡರ ವಿರುದ್ಧ ಗ್ರಾಮಸ್ಥರ ಆಕ್ರೋಶ - election campaign

ಗ್ರಾಮಕ್ಕೆ ಕಾಲಿಡದ ಶಾಸಕಿ ರೂಪಾಲಿ ನಾಯ್ಕ ಪರವಾಗಿ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಬಿಜೆಪಿ ಮುಖಂಡರುಗಳ ವಿರುದ್ಧ ಮಾಜಾಳಿಯ ಬಾವಳ ಗ್ರಾಮಸ್ಥರು ಆಕ್ರೋಷ ವ್ಯಕ್ತಪಡಿಸಿದ್ದಾರೆ.

villagers-outraged-against-mla-rupali-nayka
ಗೆದ್ದ ಬಳಿಕ ಗ್ರಾಮಕ್ಕೆ ಬಾರದ ಶಾಸಕಿ: ಬಿಜೆಪಿ ಮುಖಂಡರ ವಿರುದ್ಧ ಗ್ರಾಮಸ್ಥರ ಆಕ್ರೋಶ!
author img

By

Published : Apr 27, 2023, 10:55 PM IST

ಬಿಜೆಪಿ ಮುಖಂಡರ ವಿರುದ್ಧ ಗ್ರಾಮಸ್ಥರ ಆಕ್ರೋಶ!

ಕಾರವಾರ (ಉತ್ತರ ಕನ್ನಡ): ರಾಜ್ಯದ 224 ಕ್ಷೇತ್ರಗಳಲ್ಲೂ ಚುನಾವಣಾ ಕಾವು ಏರತೊಡಗಿದೆ. ಅಭ್ಯರ್ಥಿಗಳು ಮತ್ತು ಅವರ ಪರ ಬೆಂಬಲಿಗರು, ಪಕ್ಷದ ಮುಖಂಡರು, ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಮಧ್ಯೆ ಕೆಲವೆಡೆ ಅಭ್ಯರ್ಥಿಗಳಿಗೆ ಆಯಾ ಕ್ಷೇತ್ರದಲ್ಲಿ ಮತದಾರರಿಂದಲೇ ವಿರೋಧ ವ್ಯಕ್ತವಾಗುತ್ತಿದೆ. ಇದಕ್ಕೆ ಕಾರಣ ಶಾಸಕರು ಈವರೆಗೆ ತಮ್ಮ ಗ್ರಾಮದತ್ತ ಸುಳಿಯದೆ ಈಗ ಚುನಾವಣೆ ಇದೆ ಎಂಬ ಕಾರಣಕ್ಕೆ ಅವರ ಪರ ಮತ ಯಾಚಿಸಲು ತೆರಳಿರುವುದವರಿಗೆ ಮುಜುಗರ ಎದುರಿಸುತ್ತಿದ್ದಾರೆ. ಜಿಲ್ಲೆಯಲ್ಲೂ ಇದೇ ರೀತಿಯ ಘಟನೆ ಬೆಳಕಿಗೆ ಬಂದಿದೆ.

ಚುನಾವಣೆಯಲ್ಲಿ ಗೆದ್ದು ಶಾಸಕರಾದ ಬಳಿಕ ಒಮ್ಮೆಯೂ ಗ್ರಾಮಕ್ಕೆ ಬಂದಿಲ್ಲ ಮತ್ತು ತಮ್ಮ ಸಮಸ್ಯೆಯನ್ನು ಆಲಿಸಿಲ್ಲವೆಂದು ಆರೋಪಿಸಿ ಕಾರವಾರ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕಿ ರೂಪಾಲಿ ಸಂತೋಷ್​​ ನಾಯ್ಕ ಅವರ ಪರ ಪ್ರಚಾರಕ್ಕೆ ಆಗಮಿಸಿದ್ದ ಪಕ್ಷದ ಮುಖಂಡರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ತಾಲೂಕಿನ ಮಾಜಾಳಿಯ ಬಾವಳದಲ್ಲಿ ಗುರುವಾರ ನಡೆದಿದೆ.

ಗ್ರಾಮಕ್ಕೆ ಬಿಜೆಪಿ ಮುಖಂಡ ಉಡುಪಿ ಜಿಲ್ಲೆಯ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಸೇರಿದಂತೆ ಸ್ಥಳೀಯ ಮುಖಂಡರುಗಳು ಬಿಜೆಪಿ ಅಭ್ಯರ್ಥಿ ಶಾಸಕಿ ರೂಪಾಲಿ ನಾಯ್ಕ ಪರ ಚುನಾವಣಾ ಪ್ರಚಾರಕ್ಕೆ ತೆರಳಿದ್ದರು. ಆದರೆ ಶಾಸಕಿ ರೂಪಾಲಿ ನಾಯ್ಕ ಪ್ರಚಾರಕ್ಕೆ ಆಗಮಿಸಿರಲಿಲ್ಲ. ಇದನ್ನು ಪ್ರಶ್ನಿಸಿದ ಸ್ಥಳೀಯರು ಬಿಜೆಪಿ ಮುಖಂಡರ ಬಳಿ ಅಸಮಾಧಾನ ವ್ಯಕ್ತಪಡಿಸಿದರು.

ಶಾಸಕಿ ರೂಪಾಲಿ ನಾಯ್ಕ 2018ರ ಚುನಾವಣೆಯ ಸಮಯದಲ್ಲಿ ಮತಯಾಚನೆಗೆ ಬಂದಿದ್ದವರು ಮತ್ತೆ ಈ ಕಡೆ ಮುಖ ತೋರಿಸಿಲ್ಲ. ಸ್ಥಳೀಯವಾಗಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ, ಈಗ ಮತ ಯಾಚನೆಗೆ ಬಂದಿದ್ದೀರಾ. ಬೇರೆ ಜಿಲ್ಲೆಯ ನಾಯಕರು ಇಲ್ಲಿನವರ ಪರ ಬಂದು ಪ್ರಚಾರ ಮಾಡುವುದೇನಿದೆ? ಶಾಸಕಿಯೇ ಸ್ಥಳಕ್ಕೆ ಬಂದು ಗ್ರಾಮಸ್ಥರ ಸಮಸ್ಯೆ ಆಲಿಸಲು ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಬಳಿಕ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಆಕ್ರೋಶಗೊಂಡ ಸ್ಥಳೀಯರನ್ನು ಸಮಾಧಾನಪಡಿಸುವ ಪ್ರಯತ್ನ ನಡೆಸಿದರಾದರೂ ಕೆಲ ಮಂದಿ ಸಭೆಗೆ ತೆರಳದೇ ವೇದಿಕೆ ಹೊರಗೆ ನಿಂತು ಭಾಷಣ ಕೇಳಿದರು. ಬಳಿಕ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಿಂದ ಶಾಸಕಿ ರೂಪಾಲಿ ನಾಯ್ಕ ಸಾಕಷ್ಟು ಅನುದಾನ ತಂದು ಕೆಲಸ ಮಾಡಿದ್ದಾರೆ. ಅವರನ್ನು ಮತ್ತೊಮ್ಮೆ ಆರಿಸಿ ತರಬೇಕು.

ಅಲ್ಲದೆ ಆರೋಗ್ಯ, ಕ್ರೀಡೆ, ಆಸ್ಪತ್ರೆಯನ್ನು ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿದ್ದಾರೆ. ಯಾರಿಗಾದರೂ ಸಮಸ್ಯೆಯಾಗಿದ್ದರೇ ಇಲ್ಲಿ ಹೇಳಿದ್ದರೇ ಸಮಸ್ಯೆ ಬಗೆಹರಿಯುವುದಿಲ್ಲ. ಮನವಿ ನೀಡಿ ಅದನ್ನು ಬಗೆಹರಿಸುವ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಇನ್ನು ಈ ಘಟನೆ ಬಗ್ಗೆ ಮಾತನಾಡಿದ ಮಾಜಿ ಶಾಸಕ ಸತೀಶ್ ಸೈಲ್ ಶಾಸಕರಿಗೆ ಕೆಲಸ ಮಾಡಿದ್ದರೇ ಈ ಸ್ಥಿತಿ ಬರುತ್ತಿರಲಿಲ್ಲ. ಜನ ಮುಂದಿನ ದಿನದಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಮೇ 3ಕ್ಕೆ ಪ್ರಧಾನಿ ನರೇಂದ್ರ ಮೋದಿ ಅಂಕೋಲಾಗೆ; ಕೇಂದ್ರ ಸಚಿವ ಶ್ರೀಪಾದ ನಾಯ್ಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.