ಶಿರಸಿ: ಎರಡು ದಿನಗಳ ವಿಭಾಗೀಯ ಮಟ್ಟದ ಯೋಗಾಸನ ಸ್ಪರ್ಧೆಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಚಾಲನೆ ನೀಡಿದರು.
ನಗರದ ಜೆ.ಎಂ.ಜೆ. ಕಾಲೇಜಿನಲ್ಲಿ ನಡೆಯುತ್ತಿರುವ ಯೋಗ ಸ್ಪರ್ಧೆಯಲ್ಲಿ 250 ಸ್ಪರ್ಧಿಗಳು ಪಾಲ್ಗೊಂಡಿದ್ದು, 9 ಜಿಲ್ಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ರಾಜ್ಯಮಟ್ಟದಲ್ಲಿ ಹೆಸರು ಮಾಡಿರುವ ವಿದ್ಯಾರ್ಥಿ ಅಭಿಷೇಕ ಹೆಗಡೆ ಯೋಗಾಸನ ಮಾಡುವ ಮೂಲಕ ಸ್ಪರ್ಧೆಗೆ ಹುರುಪು ತುಂಬಿದರು.
ಈ ವೇಳೆ ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಯೋಗಾಸನವು ಪ್ರದರ್ಶನ ಅಥವಾ ಸ್ಪರ್ಧೆಗೆ ಮಾತ್ರ ಸೀಮಿತವಾಗಬಾರದು. ಅದು ನಮ್ಮ ಜೀವನದ ಒಂದು ಭಾಗವಾಗಬೇಕು. ಯೋಗಾಸನ ಜನಜೀವನದ ಉಸಿರು ಆಗಬೇಕು. ಆಗ ಮಾತ್ರ ಮಾನಸಿಕ ಹಾಗೂ ದೈಹಿಕ ಆರೋಗ್ಯ ಮತ್ತು ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಾಣ ಆಗಲು ಸಾಧ್ಯ ಎಂದರು.