ETV Bharat / state

ಯಲ್ಲಾಪುರದಲ್ಲಿ ಮತದಾನ ಪ್ರಕ್ರಿಯೆ ಪೂರ್ಣ: ಗೆಲುವಿನ ಲೆಕ್ಕಾಚಾರದಲ್ಲಿ ಅಭ್ಯರ್ಥಿಗಳು

ಯಲ್ಲಾಪುರ ಕ್ಷೇತ್ರದಲ್ಲಿ ಉಪ ಚುನಾವಣೆಗೆ ಬಿಜೆಪಿಯಿಂದ ಶಿವರಾಮ ಹೆಬ್ಬಾರ್ ಮತ್ತು ಕಾಂಗ್ರೆಸ್​ನಿಂದ ಭೀಮಣ್ಣ ನಾಯ್ಕ ಸ್ಪರ್ಧಿಸಿದ್ದು, ಇಬ್ಬರು ಅಭ್ಯರ್ಥಿಗಳ ನಡುವೆ ನೇರ ಹಣಾಹಣಿಯಿದೆ. ಎರಡೂ ಪಕ್ಷದ ಅಭ್ಯರ್ಥಿಗಳು ತಮ್ಮ ತಮ್ಮ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದ್ದು, ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

author img

By

Published : Dec 5, 2019, 9:17 PM IST

voting process Completed in Yallapur
ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸಿದ ಅಭ್ಯರ್ಥಿಗಳು

ಶಿರಸಿ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜಕೀಯ ಪಕ್ಷಗಳ ನಡುವೆ ಗೆಲುವಿನ ಲೆಕ್ಕಾಚಾರ ಶುರುವಾಗಿದೆ.

ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸಿದ ಅಭ್ಯರ್ಥಿಗಳು

ಕ್ಷೇತ್ರದಲ್ಲಿ ಉಪ ಚುನಾವಣೆಗೆ ಬಿಜೆಪಿಯಿಂದ ಶಿವರಾಮ ಹೆಬ್ಬಾರ್ ಮತ್ತು ಕಾಂಗ್ರೆಸ್​ನಿಂದ ಭೀಮಣ್ಣ ನಾಯ್ಕ ಮತ್ತು ಜೆಡಿಎಸ್​ನಿಂದ ಚೈತ್ರಾ ಗೌಡ ಸ್ಪರ್ಧಿಸಿದ್ದು, ಕಾಂಗ್ರೆಸ್​-ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿಯಿದೆ. ಮೂರು ಪಕ್ಷದ ಅಭ್ಯರ್ಥಿಗಳು ತಮ್ಮ ತಮ್ಮ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದ್ದು, ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಈ ಬಾರಿಯ ಉಪ ಚುನಾವಣೆಯಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್​ನಿಂದ ಯಾರೇ ಅಭ್ಯರ್ಥಿಗಳು ಗೆದ್ದರೂ ಅದು ಅವರ ಮೊದಲ ಜಯವಾಗಲಿದೆ. ಶಿವರಾಮ ಹೆಬ್ಬಾರ್ ಆಯ್ಕೆಯಾದಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಶಾಸಕರಾಗಲಿದ್ದಾರೆ. ಇನ್ನು ಮೂರು ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಸೋತಿರುವ ಭೀಮಣ್ಣ ಗೆದ್ದರೆ ಮೊದಲ ಬಾರಿಗೆ ವಿಧಾನಸೌಧ ಪ್ರವೇಶ ಮಾಡಲಿದ್ದಾರೆ. ಜೆಡಿಎಸ್​ನಿಂದ ಸ್ಪರ್ಧಿಸಿರುವ ಚೈತ್ರಾ ಗೌಡ ಕೂಡಾ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಒಟ್ಟಾರೆಯಾಗಿ ಎಲ್ಲಿಯೂ ಅಹಿತಕರ ಘಟನೆಗಳು ನಡೆಯದಂತೆ ಮತದಾನ ಪ್ರಕ್ರಿಯೆ ಮುಗಿದಿದ್ದು, ಡಿಸೆಂಬರ್​ 9ರಂದು ಫಲಿತಾಂಶ ಹೊರಬರಲಿದೆ.‌

Intro:ಶಿರಸಿ :
Intro : (web lead ) :
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಎಲ್ಲರೂ ಫಲಿತಾಂಶದ ಕುರಿತು ಚರ್ಚಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಕಮಲದ ಹವಾ ಜೋರಾಗಿದ್ದರೇ, ಕೈ ಪೈಪೋಟಿ ನೀಡಬಹುದು ಎಂದು ಜನರು ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಆದರೆ ಜೆಡಿಎಸ್ ಮತ್ತು ಇತರೆ ಅಭ್ಯರ್ಥಿಗಳು ಠೇವಣಿ ಉಳಿಸಿಕೊಳ್ಳುವುದೂ ಕಷ್ಟ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Body:V-1 :
ಯಲ್ಲಾಪುರ ಉಪ ಚುನಾವಣೆಗೆ ಬಿಜೆಪಿಯಿಂದ ಶಿವರಾಮ ಹೆಬ್ಬಾರ್ ಮತ್ತು ಕಾಂಗ್ರೆಸ್ ನಿಂದ ಭೀಮಣ್ಣ ನಾಯ್ಕ ಸ್ಪರ್ಧಿಸಿದ್ದು, ಇವರ ನಡುವೇ ನೇರ ಹಣಾಹಣಿಯಿದೆ. ಕ್ಷೇತ್ರದಾದ್ಯಂತ ಬಿಜೆಪಿಗೆ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ನಿರೀಕ್ಷೆಯಂತೆ ಯಲ್ಲಾಪುರದಲ್ಲಿ ಶಿವರಾಮ ಹೆಬ್ಬಾರ್ ಅವರಿಗೆ ಭಾರೀ ಬೆಂಬಲ ದೊರಕಿದ್ದು, ಯಲ್ಲಾಪುರ ತಾಲೂಕು ಬಿಜೆಪಿಗೆ ದೊಡ್ಡ ಅಂತರದ ಮತ ಗಳಿಸಿಕೊಡಬಹುದು ಎಂದು ಅಂದಾಜಿಸಲಾಗಿದೆ. ಇನ್ನು ಮುಂಡಗೋಡಿನಲ್ಲಿ ಕಾಂಗ್ರೆಸ್ ಅಲೆ ಹೆಚ್ಚಾಗಿದೆ ಎಂದು ಭಾವಿಸಿದ್ದರು. ಆದರೆ ಅಲ್ಲಿಯೂ ಹೆಬ್ಬಾರ್ ಮೇಲೆ ಅಭಿಮಾನ ವ್ಯಕ್ತವಾಗಿದೆ. ಇನ್ನು ಬನವಾಸಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆಯಿದ್ದು, ಎರಡೂ ಪಕ್ಷವೂ ಸಮನಾಗಿ ಮತಗಳ ಹಂಚಿಕೆ ಮಾಡಿಕೊಳ್ಳಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.

V-2 :
ಭೀಮ ಪೈಪೋಟಿ !
ಹೆಬ್ಬಾರ್ ಅವರ ವಿಜಯದ ಸಂಕೇತ ಹೆಚ್ಚಾಗಿದ್ದರೂ ಕಾಂಗ್ರೆಸ್ ‌ನಿಂದ ಭೀಮಣ್ಣ ತೀವ್ರ ಪೈಪೋಟಿ ನೀಡಬಹುದು ಎಂದು ಅಂದಾಜಿಸಲಾಗಿದೆ. ಬನವಾಸಿಯಲ್ಲಿ ಹಾಗೂ ಮುಂಡಗೋಡಿನಲ್ಲಿ ಉತ್ತಮ ಸಾಧನೆ ಮಾಡಿರುವ ಕಾಂಗ್ರೆಸ್ ಯಲ್ಲಾಪುರ ಕ್ಷೇತ್ರದಲ್ಲಿ ಎಷ್ಟು ಮತಗಳನ್ನು ಹೆಬ್ಬಾರರಿಂದ ಕಸಿಯುತ್ತದೆ ಎನ್ನುವುದರ ಮೇಲೆ ಗೆಲುವು ನಿಂತಿದೆ. ಒಂದೊಮ್ಮೆ ಬನವಾಸಿಯಲ್ಲಿ ಹೆಚ್ಚಿನ ಮತಗಳ ಅಂತರ ದೊರೆತಲ್ಲಿ ಅಲ್ಪ ಮತಗಳ ಅಂತರದಿಂದ ಜಯ ದಾಖಲಿಸಬಹುದಾಗಿದೆ ಎನ್ನುವುದು ರಾಜಕೀಯ ಲೆಕ್ಕಾಚಾರವಾಗಿದೆ.

Conclusion:V-3 :
ಚುನಾವಣೆಯಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್ ಯಾರೇ ಗೆದ್ದರೂ ಅದು ಮೊದಲ ಬಾರಿ ಎನಿಸಲಿದೆ. ಶಿವರಾಮ ಹೆಬ್ಬಾರ್ ಆಯ್ಕೆಯಾದಲ್ಲಿ, ಮೊದಲ ಬಾರಿಗೆ ಬಿಜೆಪಿಯಿಂದ ಶಾಸಕರಾಗಲಿದ್ದಾರೆ. ಇನ್ನು ಮೂರು ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಸೋತಿರುವ ಭೀಮಣ್ಣ ಗೆದ್ದರೇ ಮೊದಲ ಬಾರಿಗೆ ವಿಧಾಮಸೌಧ ಪ್ರವೇಶ ಮಾಡಲಿದ್ದಾರೆ. ಒಟ್ಟಾರೆಯಾಗಿ ಎಲ್ಲಿಯೂ ಅಹಿತಕರ ಘಟನೆಗಳು ನಡೆಯದಂತೆ ಮತದಾನ ಪ್ರಕ್ರಿಯೆ ಮುಗಿದಿದ್ದು, ಡಿ.೯ ರಂದು ಫಲಿತಾಂಶ ಹೊರಬರಲಿದೆ.‌
‌............
ಸಂದೇಶ ಭಟ್ ಶಿರಸಿ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.