ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಅದರಲ್ಲಿಯೂ ಘಟ್ಟದ ಮೇಲ್ಭಾಗದ ತಾಲೂಕುಗಳಲ್ಲಿ ಮಳೆ ವ್ಯಾಪಕವಾಗಿ ಸುರಿಯತೊಡಗಿದೆ.
ಕಾಳಿ ನದಿ ತೀರದ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಕದ್ರಾ ಜಲಾಶಯಕ್ಕೆ ಯಥೇಚ್ಛವಾಗಿ ನೀರು ಹರಿದುಬಂದಿದ್ದು, ಜಲಾಶಯದಿಂದ ನೀರನ್ನ ನಿರಂತರವಾಗಿ ಹೊರ ಬಿಡಲಾಗುತ್ತಿದೆ. ಇಂದು ಕೂಡ 1.5 ಲಕ್ಷ ಕ್ಯೂಸೆಕ್ ನೀರನ್ನ ಹೊರಬಿಟ್ಟಿದ್ದು, ಕಾಳಿ ನದಿ ತೀರದ ಜನರಲ್ಲಿ ಸಂಕಷ್ಟ ಎದುರಾಗಿದೆ.
ಸದ್ಯ ಕದ್ರಾ ಜಲಾಶಯದಿಂದ ನಿರಂತರವಾಗಿ ನೀರನ್ನು ಹೊರ ಹಾಕಿ ನೀರಿನ ಮಟ್ಟವನ್ನು ಕಾಪಾಡಿಕೊಳ್ಳಲಾಗುತ್ತಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.
ಇದನ್ನೂ ಓದಿ: ಉತ್ತರಕನ್ನಡದಲ್ಲಿ ವ್ಯಾಪಕ ಮಳೆ: ಎರಡು ಜಲಾಶಯದಿಂದ ನೀರು ಹೊರಕ್ಕೆ