ಶಿರಸಿ: ಕಾಡುಕೋಣದ ಕೊಂಬನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿ 2 ಕೊಂಬನ್ನು ವಶಪಡಿಸಿಕೊಂಡ ಘಟನೆ ತಾಲೂಕಿನ ಹತ್ತರಗಿ ಕ್ರಾಸ್ ಬಳಿ ಶನಿವಾರ ನಡೆದಿದೆ.
ಹೆಗಡೆಕಟ್ಟಾದ ಸಮಿವುಲ್ಲಾ ಅಬ್ದುಲ್ ರೆಹಮಾನ್ ಸಾಬ್ (29) ಬಂಧಿತ ಆರೋಪಿಯಾಗಿದ್ದಾನೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆರೋಪಿಯಿಂದ 25 ಸಾವಿರ ರೂ. ಮೌಲ್ಯದ ಕಾಡುಕೋಣದ 2 ಕೊಂಬನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.