ಭಟ್ಕಳ: ಮಹಿಳೆವೋರ್ವಳು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಳೆಗದ್ದೆಯಲ್ಲಿ ಇಂದು ನಡೆದಿದೆ.
ಜಟ್ಟಮ್ಮ ನಾರಾಯಣ ನಾಯ್ಕ (55) ಮೃತ ಮಹಿಳೆ. ಇಂದು ಬೆಳಗ್ಗೆ ಪತಿ ಹಾಗೂ ಮಗ ತೋಟದ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಮನೆಯಲ್ಲಿ ಯಾರು ಇರದ ಸಮಯ ನೋಡಿಕೊಂಡು ಜಟ್ಟಮ್ಮ ನೇಣಿಗೆ ಶರಣಾಗಿದ್ದಾಳೆ. ನಂತರ ಮಗಳು ಮನೆಗೆ ಬಂದು ನೋಡಿದಾಗ ತಾಯಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಮೃತದೇಹವನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.