ಶಿರಸಿ: ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿ ನೀಡುವ ಗೌರವ ಪ್ರಶಸ್ತಿ ಹಾಗೂ ಯಕ್ಷಸಿರಿ ಪ್ರಶಸ್ತಿ ಉತ್ತರ ಕನ್ನಡ ಜಿಲ್ಲೆಯ ಮೂವರು ಸಾಧಕರಿಗೆ ಲಭಿಸಿದೆ. ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಜಿಲ್ಲೆಯಿಂದ ಗೌರವ ಪ್ರಶಸ್ತಿಗೆ ಡಾ.ವಿಜಯನಳಿನಿ ರಮೇಶ್ ಹಾಗೂ ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ಶಿರಸಿಯ ಎಮ್.ಆರ್.ಹೆಗಡೆ ಕಾನಗೋಡ ಮತ್ತು ಧಾರೇಶ್ವರದ ಸುಬ್ರಹ್ಮಣ್ಯ ಧಾರೇಶ್ವರ ಅವರುಗಳನ್ನು ಆಯ್ಕೆ ಮಾಡಲಾಗಿದೆ.
ಗೌರವ ಪ್ರಶಸ್ತಿ ಪುರಸ್ಕೃತರಿಗೆ 50 ಸಾವಿರ ರೂ. ನಗದು ಹಾಗೂ ಯಕ್ಷಸಿರಿ ಪ್ರಶಸ್ತಿ 25 ಸಾವಿರ ರೂ. ನಗದು ಮತ್ತು ಪ್ರಶಸ್ತಿ, ಫಲಕ, ಪ್ರಮಾಣಪತ್ರ ನೀಡಿ ಪುರಸ್ಕರಿಸಲಾಗುವುದು ಎಂದು ಅಕಾಡೆಮಿಯ ಸದಸ್ಯೆ ಶಿರಸಿ ನಿರ್ಮಲಾ ಗೋಳಿಕೊಪ್ಪ ತಿಳಿಸಿದ್ದಾರೆ.